ಬೈಕ್‌ ಕಳ್ಳನ ಸೆರೆ; ₹ 2.50 ಲಕ್ಷ ಮೌಲ್ಯದ 4 ಬೈಕ್‌ಗಳ ಜಪ್ತಿ

| Published : May 05 2024, 02:11 AM IST / Updated: May 05 2024, 04:51 AM IST

WOMAN ARREST
ಬೈಕ್‌ ಕಳ್ಳನ ಸೆರೆ; ₹ 2.50 ಲಕ್ಷ ಮೌಲ್ಯದ 4 ಬೈಕ್‌ಗಳ ಜಪ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ಮನೆ ಎದುರು ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಮಾಡಿದ್ದ ಆರೋಪಿಯನ್ನು ಚಾಮರಾಜಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

 ಬೆಂಗಳೂರು ; ಮನೆ ಎದುರು ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಮಾಡಿದ್ದ ಆರೋಪಿಯನ್ನು ಚಾಮರಾಜಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಹೆಗಡೆ ನಗರದ ಮುಬಾರಕ್‌ (25) ಎಂಬಾತನಿಂದ 2.50 ಲಕ್ಷ ರು. ಮೌಲ್ಯದ 4 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಚಾಮರಾಜಪೇಟೆಯ ಮಹಾದೇವ ಪ್ರಸಾದ್‌ ಎರಡು ವರ್ಷದ ಹಿಂದೆ ತಮ್ಮ ಮನೆ ಮುಂದೆ ದ್ವಿಚಕ್ರ ವಾಹನ ನಿಲ್ಲಿಸಿದ್ದರು. ಮರೆತು ದ್ವಿಚಕ್ರ ವಾಹನದಲ್ಲಿಯೇ ಕೀ ಬಿಟ್ಟಿದ್ದರು. ಮರುದಿನ ನೋಡಿದಾಗ ದ್ವಿಚಕ್ರ ವಾಹನ ಕಳ್ಳತನವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿ ಅಪರಾಧ ಹಿನ್ನೆಲೆವುಳ್ಳವನಾಗಿದ್ದಾನೆ. ಮನೆ ಎದುರು, ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳ ಹ್ಯಾಂಡಲ್‌ ಲಾಕ್‌ ಮುರಿದು ಕಳವು ಮಾಡುತ್ತಿದ್ದ. ಪರಿಚಿತರ ಮೂಲಕ ವಿಲೇವಾರಿ ಮಾಡಿಸಿ ಹಣ ಪಡೆದು ಮೋಜು-ಮಸ್ತಿ ಮಾಡುತ್ತಿದ್ದ. ಈತನ ಬಂಧನದಿಂದ ಚಾಮರಾಜಪೇಟೆ, ಕಲಾಸಿಪಾಳ್ಯ, ಕೆ.ಜಿ.ಹಳ್ಳಿ ಹಾಗೂ ಗಿರಿನಗರ ಠಾಣೆಯಲ್ಲಿ ದಾಖಲಾಗಿದ್ದ ತಲಾ ಒಂದು ಸೇರಿದಂತೆ 4 ದ್ವಿಚಕ್ರ ವಾಹನಗ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.