ಮತದಾನಕ್ಕೆ ಸಕಲ ಸಿದ್ಧತೆ: ಸಂತೋಷ ಕಾಮಗೊಂಡ

| Published : May 07 2024, 01:01 AM IST

ಸಾರಾಂಶ

ಕನ್ನಡಪ್ರಭ ವಾರ್ತೆ, ಜಮಖಂಡಿ ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಾಲೂಕು ಚುನಾವಣೆ ಅಧಿಕಾರಿ ಸಂತೋಷ ಕಾಮಗೊಂಡ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ, ಜಮಖಂಡಿಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಾಲೂಕು ಚುನಾವಣೆ ಅಧಿಕಾರಿ ಸಂತೋಷ ಕಾಮಗೊಂಡ ತಿಳಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನಾದ್ಯಂತ 232 ಮತಗಟ್ಟೆ ಸ್ಥಾಪಿಸಲಾಗಿದೆ. ಸುಮಾರು ಎರಡು ಲಕ್ಷ ಮೂವತ್ತು ಸಾವಿರ ಮತದಾರರು ಹಕ್ಕು ಚಲಾಯಿಸಲಿದ್ದಾರೆ.

232 ಮತಗಟ್ಟೆಗಳಿಗೆ 1080 ಪೋಲಿಂಗ್ ಅಧಿಕಾರಿಗಳು, 35 ಜನ ಮೈಕ್ರೋ ಅಬ್ಸರ್ವರ್‌ ಗಳನ್ನು ನೇಮಿಸಲಾಗಿದೆ. ಎಲ್ಲಾ ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.ಚುನಾವಣೆ ಕಾರ್ಯಕ್ಕೆ ಬೇರೆ ಊರುಗಳಿಂದ ಬಂದಿರುವ ಪೋಲಿಂಗ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಕಲ ವ್ಯವಸ್ಥೆ ಮಾಡಲಾಗಿದೆ. ಮತದಾನಕ್ಕೆ ಬೇಕಾಗುವ ಎಲ್ಲ ಸಾಮಗ್ರಿಗಳು ಮತ್ತು ಇವಿಎಂ ಯಂತ್ರಗಳೊಂದಿಗೆ ಸೋಮವಾರ ಸಂಜೆ ಚುನಾವಣೆ ಅಧಿಕಾರಿಗಳು, ಸಿಬ್ಬಂದಿ ಮತಗಟ್ಟೆಗಳಿಗೆ ತಲುಪಿದ್ದಾರೆ. ಮತದಾರರಿಗೆ ಮತಗಟ್ಟೆಗಳಲ್ಲಿ ನೆರಳು, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದ್ದು, ತಾಲೂಕಿನ ಎಲ್ಲಾ ಮತದಾರರು ತಮ್ಮ ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ತಹಸೀಲ್ದಾರ್ ಸದಾಶಿವ ಮುಕ್ಕೊಜಿ, ಪೌರಾಯುಕ್ತೆ ಲಕ್ಷ್ಮೀ ಅಷ್ಟಗಿ ತಾಪಂ ಅಧಿಕಾರಿ ಭಾರತಿ ಚಲುವರಾಯ ಉಪಸ್ಥಿತರಿದ್ದರು.