ಹಿರೇಕೆರೂರಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

| Published : May 07 2024, 01:11 AM IST / Updated: May 07 2024, 01:12 AM IST

ಸಾರಾಂಶ

ಮಸ್ಟರಿಂಗ್ ಕೇಂದ್ರದಲ್ಲಿ ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮತಗಟ್ಟೆ ಕೇಂದ್ರಗಳಲ್ಲಿ ಪಾಲಿಸಬೇಕಾದ ನಿರ್ದೇಶನಗಳ ಕುರಿತು ಮಾಹಿತಿ ನೀಡಲಾಯಿತು. ಸಿಬ್ಬಂದಿಗೆ ಉಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ಊಟ ಮುಗಿಸಿದ ನಂತರ ಸಿಬ್ಬಂದಿ ನಿಯೋಜಿತ ಮತಗಟ್ಟೆಗಳಿಗೆ ಪ್ರಯಾಣ ಬೆಳೆಸಿದರು.

ಕನ್ನಡಪ್ರಭ ವಾರ್ತೆ ಹಿರೇಕೆರೂರು

ತಾಲೂಕಿನಲ್ಲಿ ಲೋಕಸಭಾ ಚುನಾವಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತೆರೆದ ಮಸ್ಟರಿಂಗ್ ಕೇಂದ್ರದಿಂದ ಚುನಾವಣೆಗೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತಯಂತ್ರಗಳು ಹಾಗೂ ಚುನಾವಣಾ ಪರಿಕರಗಳೊಂದಿಗೆ ಮತಗಟ್ಟೆ ಕೇಂದ್ರಗಳಿಗೆ ತೆರಳಿದರು.

ಮಸ್ಟರಿಂಗ್ ಕೇಂದ್ರದಲ್ಲಿ ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮತಗಟ್ಟೆ ಕೇಂದ್ರಗಳಲ್ಲಿ ಪಾಲಿಸಬೇಕಾದ ನಿರ್ದೇಶನಗಳ ಕುರಿತು ಮಾಹಿತಿ ನೀಡಲಾಯಿತು. ಸಿಬ್ಬಂದಿಗೆ ಉಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ಊಟ ಮುಗಿಸಿದ ನಂತರ ಸಿಬ್ಬಂದಿ ನಿಯೋಜಿತ ಮತಗಟ್ಟೆಗಳಿಗೆ ಪ್ರಯಾಣ ಬೆಳೆಸಿದರು. ಈ ಕುರಿತು ಮಾಹಿತಿ ನೀಡಿದ ಸಹಾಯಕ ಚುನಾವಣಾಧಿಕಾರಿ ಡಾ. ನಾಗರಾಜ್ ಎಲ್. ಕ್ಷೇತ್ರದಲ್ಲಿ ೨೨೯ ಮತಗಟ್ಟಿಗಳಿದ್ದು, ೯೫,೭೦೨ ಪುರುಷರು, ೯೨,೫೦೩ ಮಹಿಳೆಯರು ಹಾಗೂ ಮೂವರು ಇತರರು ಸೇರಿದಂತೆ ಒಟ್ಟು ೧,೮೮,೨೦೮ ಮತದಾರರಿದ್ದಾರೆ. ಅತಿಸೂಕ್ಷ್ಮ ಮತಗಟ್ಟೆ ೩, ಸೂಕ್ಷ್ಮ ಮತಗಟ್ಟೆ ೪೯,೧೭೭ ಸಾಮಾನ್ಯ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.೧೦೦೮ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ೧೦ ವಿಶೇಷ ಮತಗಟ್ಟೆಯನ್ನು ಸ್ಥಾಪಿಸಲಾಗಿದೆ ಎಂದರು.