ಪದವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯೇ ಬದಲು: ವಿದ್ಯಾರ್ಥಿಗಳು ಕಂಗಾಲು, ಸಮಾಜಶಾಸ್ತ್ರ ವಿಷಯದ ಮೂರನೇ ಸೆಮಿಸ್ಟರ್ ಬದಲಿಗೆ 1ನೇ ಸೆಮಿಸ್ಟರ್ನ ಪ್ರಶ್ನೆ ಪತ್ರಿಕೆ ಬಂದಿರುವುದು ಗೊತ್ತಾಗಿದೆ. ಇದರಿಂದ ಗೊಂದಲಕ್ಕೀಡಾದ ವಿದ್ಯಾರ್ಥಿಗಳು ಕೂಡಲೇ ಮೇಲ್ವಿಚಾರಕರ ಗಮನಕ್ಕೆ ತಂದಿದ್ದಾರೆ. ಆಯಾ ಕಾಲೇಜುಗಳ ಮುಖ್ಯಸ್ಥರು ವಿಶ್ವವಿದ್ಯಾಲಯದ ಗಮನಕ್ಕೆ ತರುತ್ತಿದ್ದಂತೆಯೇ ಪರೀಕ್ಷೆಯನ್ನು ಮುಂದೂಡಿ ವಿವಿ ಆದೇಶ ಹೊರಡಿಸಿದೆ.