ಕುಷ್ಟಗಿಯಲ್ಲಿ 268 ಮತಗಟ್ಟೆಗಳ ಸ್ಥಾಪನೆ

| Published : May 07 2024, 01:07 AM IST

ಕುಷ್ಟಗಿಯಲ್ಲಿ 268 ಮತಗಟ್ಟೆಗಳ ಸ್ಥಾಪನೆ
Share this Article
  • FB
  • TW
  • Linkdin
  • Email

ಸಾರಾಂಶ

ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ 268 ಮತಗಟ್ಟೆಗಳನ್ನು ಸ್ಥಾಪನೆ ಮಾಡಿದ್ದು, ಮತದಾನಕ್ಕೆ ಕ್ಷಣಗಣನೆ ಆರಂಭಗೊಂಡಿದೆ.

ಕನ್ನಡಪ್ರಭ ವಾರ್ತೆ ಕುಷ್ಟಗಿ

ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ 268 ಮತಗಟ್ಟೆಗಳನ್ನು ಸ್ಥಾಪನೆ ಮಾಡಿದ್ದು, ಮತದಾನಕ್ಕೆ ಕ್ಷಣಗಣನೆ ಆರಂಭಗೊಂಡಿದೆ.

ಮೇ 7ರಂದು ನಡೆಯುವ ಮತದಾನವು ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗಿ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಮತಗಟ್ಟೆ ಸಿಬ್ಬಂದಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿ ವಿತರಿಸುವ ಕಾರ್ಯ ನಡೆಯಿತು. ವಿದ್ಯುನ್ಮಾನ ಮತಯಂತ್ರ, ವಿವಿಪ್ಯಾಟ್, ಮತದಾನ ಸಾಮಗ್ರಿಗಳನ್ನು ಹೊತ್ತುಕೊಂಡು ಮತದಾನ ಕಾರ್ಯಕ್ಕೆ ಚುನಾವಣಾ ಸಿಬ್ಬಂದಿ ತೆರಳಿದರು.

ಕುಷ್ಟಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 268 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದ್ದು, ಈ ಪೈಕಿ ಪುರುಷರು 121526, ಮಹಿಳೆಯರು 120747, ಇತರೆ 10 ಸೇರಿದಂತೆ ಒಟ್ಟು 242283 ಮತದಾರರು ಇದ್ದಾರೆ.

ಪ್ರತಿ ಮತಗಟ್ಟೆಗೆ ತಲಾ ಒಬ್ಬರು ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ ಹಾಗೂ ಇಬ್ಬರು ಮತಗಟ್ಟೆ ಸಹಾಯಕರು, ಡಿ ಗ್ರೂಪ್ ಸೇರಿದಂತೆ ಒಂದು ಮತಗಟ್ಟೆಗೆ 5 ಜನ ಸಿಬ್ಬಂದಿಯನ್ನು ನೇಮಿಸಲಾಗಿದೆ. ಒಟ್ಟು 1578 ಜನರನ್ನು ಮತಗಟ್ಟೆಯ ಸಿಬ್ಬಂದಿ ನೇಮಕ ಮಾಡಲಾಗಿದೆ.

ಮತಗಟ್ಟೆ ಅಧಿಕಾರಿ, ಸಿಬ್ಬಂದಿಗೆ ಚುನಾವಣಾ ಸಾಮಗ್ರಿಗಳಾದ ಇವಿಎಂ ಯಂತ್ರಗಳ ಪೆಟ್ಟಿಗೆ, ವಿವಿ ಪ್ಯಾಟ್ ಯಂತ್ರದ ಪೆಟ್ಟಿಗೆ ವಿತರಿಸಲು ಕೊಠಡಿ ಸ್ಥಾಪಿಸಲಾಗಿತ್ತು. ಸಂಬಂಧಪಟ್ಟ ಮತಗಟ್ಟೆ ಸಿಬ್ಬಂದಿಗೆ ಚುನಾವಣಾ ಸಾಮಗ್ರಿ ವಿತರಿಸುವ ಕಾರ್ಯ ವ್ಯವಸ್ಥಿತವಾಗಿ ನಡೆಯಿತು. ಮಸ್ಟರಿಂಗ್ ಕಾರ್ಯದಲ್ಲಿ ವ್ಯಾಪ್ತಿಯಲ್ಲಿ ನಿಯೋಜನೆಗೊಂಡಿರುವ ಸಿಬ್ಬಂದಿ ಇವಿಎಂ, ವಿವಿಪ್ಯಾಟ್, ಬ್ಯಾಲೆಟ್ ಯೂನಿಟ್, ಶಾಯಿ, ರಟ್ಟು ಹಾಗೂ ಇತರೆ ಮತಗಟ್ಟೆ ಸಾಮಗ್ರಿಗಳನ್ನು ಸ್ಥಳದಲ್ಲೇ ಪರಿಶೀಲಿಸಿಕೊಂಡು ಮತಗಟ್ಟೆಗಳತ್ತ ಹೆಜ್ಜೆ ಹಾಕುತ್ತಿರುವುದು ಕಂಡು ಬಂತು.ಕೋಟ್:

ಕುಷ್ಟಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 268 ಮತಗಟ್ಟೆ ಇದ್ದು, ಮಂಗಳವಾರ ನಡೆಯುವ ಮತದಾನಕ್ಕೆ ಎಲ್ಲ ಸಿದ್ಧತೆ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಪೊಲೀಸ್‌ ಬಂದೋಬಸ್ತ್ ಒದಗಿಸಲಾಗಿದೆ.ರೇಷ್ಮಾ ಹಾನಗಲ್ ಸಹಾಯಕ ಚುನಾವಣಾಧಿಕಾರಿ6ಕೆಎಸಟಿ2: ಕುಷ್ಟಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಮತಗಟ್ಟೆಗೆ ಸಿಬ್ಬಂದಿ ಮತದಾನದ ಸಾಮಗ್ರಿಗಳನ್ನು ತೆಗೆದುಕೊಂಡು ತೆರಳಿದರು.