ಪ್ರತಿಯೊಬ್ಬರಿಗೂ ಕಾನೂನು ಅರಿವು ಅಗತ್ಯ

| Published : May 05 2024, 02:07 AM IST

ಸಾರಾಂಶ

ಸಮಾಜಕ್ಕೆ ಹಾಗೂ ಯುವಪೀಳಿಗೆಗೆ ಕಂಟಕವಾಗಿರುವ ಮಾದಕ ವ್ಯಸನದಿಂದ ದೂರ ಮಾಡಲು ವಿದ್ಯಾರ್ಥಿಗಳಿಗೆ ಅರಿವು ನೀಡುವ ಕೆಲಸ ಮಾಡುತ್ತಿದ್ದು, ಎಲ್ಲೇ ಆಗಲಿ ಮಾದಕ ವಸ್ತುಗಳ ಸಾಗಾಣೆ, ಮಾರಾಟ ಕಂಡು ಬಂದರೆ ಪೊಲೀಸರಿಗೆ ದೂರು ನೀಡಿ

ಕನ್ನಡಪ್ರಭ ವಾರ್ತೆ ಕೋಲಾರಮನುಷ್ಯನ ಜೀವನದಲ್ಲಿ ಆಹಾರ, ನೀರಿನಷ್ಟೇ ಕಾನೂನು ಅತಿ ಮುಖ್ಯವಾಗಿದ್ದು, ದೈನಂದಿನ ಬದುಕಿಗೆ ಅಗತ್ಯವಾದ ಕನಿಷ್ಠ ಮಟ್ಟದ ಕಾನೂನುಗಳ ಅರಿವು ಪಡೆಯಿರಿ ಎಂದು ವಿದ್ಯಾರ್ಥಿಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ್ ಎಸ್.ಹೊಸಮನಿ ಕರೆ ನೀಡಿದರು.ನಗರದ ಚೈತನ್ಯ ಇನ್ಸಿಟ್ಯೂಟ್ ಆಪ್ ಮ್ಯಾನೇಜ್ಮೆಂಟ್ ಅಂಡ್ ಸೈನ್ಸ್ ಕಾಲೇಜಿನಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಯುವಪೀಳಿಗೆಗೆ ಡ್ರಗ್ಸ್‌ ಮಾರಕ

ಸಮಾಜಕ್ಕೆ ಹಾಗೂ ಯುವಪೀಳಿಗೆಗೆ ಕಂಟಕವಾಗಿರುವ ಮಾದಕ ವ್ಯಸನದಿಂದ ದೂರ ಮಾಡಲು ವಿದ್ಯಾರ್ಥಿಗಳಿಗೆ ಅರಿವು ನೀಡುವ ಕೆಲಸ ಮಾಡುತ್ತಿದ್ದು, ಕಾಲೇಜಿನ ಆವರಣದಲ್ಲಿ ಅಥವಾ ಎಲ್ಲೇ ಆಗಲಿ ಮಾದಕ ವಸ್ತುಗಳ ಸಾಗಾಣೆ, ಮಾರಾಟ ಕಂಡು ಬಂದರೆ ಪೊಲೀಸರಿಗೆ ದೂರು ನೀಡಿ ಎಂದು ಕಿವಿಮಾತು ಹೇಳಿದರು.ಬಾಲ್ಯವಿವಾಹ ತಡೆಗಟ್ಟಿ

ಬಾಲ್ಯವಿವಾಹ ಸಮಾಜಕ್ಕೆ ಕಂಟಕವಾಗಿದೆ ಇದರ ಸಂಪೂರ್ಣ ತಡೆಗೆ ವಿದ್ಯಾರ್ಥಿ ಸಯುದಾಯದ ಸಹಕಾರ ಅಗತ್ಯವಿದೆ, ನಿಮ್ಮ ಸುತ್ತಮುತ್ತ ಬಾಲ್ಯವಿವಾಹ ಆಗುತ್ತಿದ್ದರೆ ನೀವು ಕೂಡಲೇ ೧೦೯೮ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬಹುದು, ನಿಮ್ಮ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದರು.ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ರಾಷ್ಟ್ರೀಯ ತಂಬಾಕು ನಿಯಂತ್ರಣ ಘಟಕದ ನೋಡಲ್ ಅಧಿಕಾರಿ ಡಾ.ಎಂ.ಎ.ಚಾರಣಿ ಮಾತನಾಡಿ, ಮಾದಕ, ತಂಬಾಕು ವಸ್ತುಗಳ ಸೇವನೆ ಮಾಡದಿರಿ, ಜೀವಕ್ಕೆ ಮಾತ್ರವಲ್ಲ, ನಿಮ್ಮನ್ನು ಅಪರಾಧಕ್ಕೆ ಈ ವಸ್ತುಗಳು ಪ್ರೇರೇಪಿಸುತ್ತವೆ ಎಂದು ಎಚ್ಚರಿಸಿದರು.

ಜಿಲ್ಲಾ ಸಮಾಲೋಚಕ ಪಿ.ಮಹಮದ್, ಚೈತನ್ಯ ಇನ್ಸಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಂಡ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲ ಮಹಮದ್ ಶೋಯಬ್, ಚೈತನ್ಯ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಶ್ರೀನಿವಾಸ, ಚೈತನ್ಯ ಇನ್ಸಿಟ್ಯೂಟ್ ಸಂಸ್ಥಾಪಕ ಸುಬ್ರಮಣಿ ಇದ್ದರು.