ಪ್ರಜ್ವಲ್‌ ರೇವಣ್ಣರನ್ನು ಗಡಿಪಾರು ಮಾಡಿ: ಮಾಜಿ ಎಂಎಲ್ಸಿ ಎಂ.ಎ.ಗೋಪಾಲಸ್ವಾಮಿ

| Published : May 06 2024, 12:35 AM IST

ಪ್ರಜ್ವಲ್‌ ರೇವಣ್ಣರನ್ನು ಗಡಿಪಾರು ಮಾಡಿ: ಮಾಜಿ ಎಂಎಲ್ಸಿ ಎಂ.ಎ.ಗೋಪಾಲಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಜ್ವಲ್ ರೇವಣ್ಣರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ ಆಗ್ರಹಿಸಿದ್ದಾರೆ. ಚನ್ನರಾಯಪಟ್ಟಣದಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಮಾತನಾಡಿದರು.

ಕಾಂಗ್ರೆಸ್‌ ಪ್ರತಿಭಟನೆಯಲ್ಲಿ ಭಾಗಿ

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಪ್ರಜ್ವಲ್ ರೇವಣ್ಣರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ ಆಗ್ರಹಿಸಿದ್ದಾರೆ.

ಪಟ್ಟಣದ ಕೆ.ಆರ್.ವೃತ್ತದ ಬಳಿ ಕಾಂಗ್ರೆಸ್ ಪಕ್ಷದಿಂದ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿ, ‘ಹೆಣ್ಣುಮಕ್ಕಳು ಎಂದರೆ ಅವರಿಗೆ ಸ್ವಲ್ಪ ಮರ್ಯಾದೆ ಇಲ್ಲ. ಅವರ ತಾಯಿಯೂ ಕೂಡ ಒಂದು ಹೆಣ್ಣು, ಇಂತಹ ವಿಷಯದಲ್ಲಿ ಸರ್ಕಾರ ಕೂಡಲೇ ಪ್ರಜ್ವಲ್ ರೇವಣ್ಣ ಅವರನ್ನು ವಿದೇಶದಿಂದ ಕರೆತಂದು ತನಿಖೆ ಮಾಡಿ ಕಾನೂನಿನ ಅಡಿಯಲ್ಲಿ ನೊಂದ ಮಹಿಳೆಯರಿಗೆ ಸೂಕ್ತ ನ್ಯಾಯ ಕೊಡಿಸಲು ಮುಂದಾಗಬೇಕು. ಜಿಲ್ಲೆಯ ಅದೆಷ್ಟು ನೊಂದ ಮಹಿಳೆಯರ ಮಾನ ಹರಾಜಾಗಿದೆ. ಅವರಿಗೆ ನ್ಯಾಯಾಲಯ ರಕ್ಷಣೆ ನೀಡಬೇಕು. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ತನಿಖೆ ನಡೆಸಿ ಇದರ ಹಿಂದೆ ಇರುವ ಕಾಣದ ಕೈಗಳಿಗೂ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಂ. ಶಂಕರ್ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಅಧ್ಯಕ್ಷ ಎಲ್.ಪಿ.ಪ್ರಕಾಶ್‌ಗೌಡ ಮಾತನಾಡಿ, ರೇವಣ್ಣ ಮತ್ತು ಅವರ ಮಕ್ಕಳು ಜಿಲ್ಲೆಯಲ್ಲಿ ನಡೆಸುತ್ತಿದ್ದ ದರ್ಪ ದೌಜನ್ಯಗಳ ಪಾಪದ ಕೊಡ ತುಂಬಿದ್ದು ದೇವರ ಕೈಯಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದಕ್ಕೆ ಇದೇ ನಿದರ್ಶನ, ಇನ್ನು ಮುಂದೆ ಹೆಣ್ಣುಮಕ್ಕಳು ದೇವೇಗೌಡರ ಕುಟುಂಬದ ಬಳಿ ಹೋಗಲು ಹೆದರುತ್ತಾರೆ. ಕಾನೂನಿನ ಅಡಿ ಪ್ರಜ್ವಲ್ ಎಲ್ಲೇ ಇದ್ದರೂ ಕರೆದಂತು ನ್ಯಾಯಾಲಯಕ್ಕೆ ಒಪ್ಪಿಸಬೇಕು ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಎ.ಮಂಜುನಾಥ್, ಕಾಂಗ್ರೆಸ್ ಮುಖಂಡರಾದ ದಂಡೋರ ಮಂಜುನಾಥ್, ಮಖಾನ್‌ ವಿನೋದ್, ಎಚ್.ಸಿ. ಶಂಕರಲಿಂಗೇಗೌಡ, ವಕೀಲರಾದ ಬಸವರಾಜ್, ಸುಜಾತ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮೂರ್ತಿ, ಪ್ರಕಾಶ್, ಅಂಗಡಿ ಮಂಜಣ್ಣ ಮತ್ತಿತರಿದ್ದರು.