ಪ್ರಜ್ವಲ್‌ ರಕ್ಷಿಸುವ ಪ್ರಶ್ನೆಯೇ ಇಲ್ಲ: ಶಾಸಕ ಸುರೇಶ್ ಗೌಡ

| Published : May 06 2024, 12:32 AM IST

ಪ್ರಜ್ವಲ್‌ ರಕ್ಷಿಸುವ ಪ್ರಶ್ನೆಯೇ ಇಲ್ಲ: ಶಾಸಕ ಸುರೇಶ್ ಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಪೆನ್ ಡ್ರೈವ್ ಪ್ರಕರಣ ತನಿಖೆ ಹಂತದಲ್ಲಿದೆ. ತಪ್ಪು ಯಾರೇ ಮಾಡಲಿ ಅದು ತಪ್ಪೇ, ಈ ಪ್ರಕರಣ ಕುರಿತು ಬಿಜೆಪಿ ಮೊದಲು ಖಂಡಿಸಿದೆ. ಆರೋಪಿಯನ್ನು ರಕ್ಷಿಸುವ ಪ್ರಶ್ನೆ ಇಲ್ಲ.

ಕನ್ನಡಪ್ರಭ ವಾರ್ತೆ ಶಹಾಪುರ

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಶಹಾಪುರ ಮತಕ್ಷೇತ್ರದ ಚುನಾವಣೆ ಉಸ್ತುವಾರಿ ಹಾಗೂ ಬೇಲೂರು ಶಾಸಕ ಎಚ್. ಕೆ. ಸುರೇಶ್ ಗೌಡ, ಪ್ರಕರಣ ತನಿಖೆ ಹಂತದಲ್ಲಿದೆ, ಆರೋಪಿ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.

ನಗರದ ಬಿಜೆಪಿ ಜಿಲ್ಲಾಧ್ಯಕ್ಷ ಅಮೀನ್ ರೆಡ್ಡಿ ಯಾಳಗಿ ಅವರ ಗೃಹ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪೆನ್ ಡ್ರೈವ್ ಪ್ರಕರಣ ತನಿಖೆ ಹಂತದಲ್ಲಿದೆ. ತಪ್ಪು ಯಾರೇ ಮಾಡಲಿ ಅದು ತಪ್ಪೇ, ಈ ಪ್ರಕರಣ ಕುರಿತು ಬಿಜೆಪಿ ಮೊದಲು ಖಂಡಿಸಿದೆ. ಆರೋಪಿಯನ್ನು ರಕ್ಷಿಸುವ ಪ್ರಶ್ನೆ ಇಲ್ಲ. ಕೇಂದ್ರ ಗೃಹ ಮಂತ್ರಿ ಅಮಿತ್‌ ಶಾ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ರಕ್ಷಿಸುವ ಪ್ರಶ್ನೆಯೇ ಬರುವುದಿಲ್ಲ. ತಪ್ಪು ಯಾರೇ ಮಾಡಲಿ ಅವರಿಗೆ ಶಿಕ್ಷೆಯಾಗಬೇಕು ಎಂದು ಅವರೇ ಹೇಳಿದ್ದಾರೆ ಎಂದರು.

ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರ ಗೆಲುವು ನಿಶ್ಚಿತ. ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ನಂಬಿಕೆಯಿರಿಸಿ ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್‌ ಬೆಂಬಲ ಸೂಚಿಸಿದೆ. ಅಭಿವೃದ್ಧಿ ಹೊಂದಿದ ಭಾರತದ ಬಗ್ಗೆ ಮೋದಿಯವರ ದೂರದೃಷ್ಟಿಯನ್ನು ಮೆಚ್ಚಿ ಜೆಡಿಎಸ್ ಬಿಜೆಪಿಯನ್ನು ಬೆಂಬಲಿಸಿದೆ ಎಂದು ಶಾಸಕ ಎಚ್. ಕೆ. ಸುರೇಶ್ ಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಆಡಳಿತದಿಂದ ಈ ದೇಶದ ಅಭಿವೃದ್ಧಿ ಅಸಾಧ್ಯ ಎನ್ನುವುದು ಮತದಾರನಿಗೆ ಮನವರಿಕೆಯಾಗಿದೆ. ಆದ್ದರಿಂದ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ ಎನ್ನುವದು ಈ ಕ್ಷೇತ್ರದ ಮತದಾರರಿಂದ ಕೇಳಿ ಬರುತ್ತಿದೆ. ಮತದಾರರ ತೀರ್ಮಾನವೇ ಅಂತಿಮವಾಗುತ್ತದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಅಮೀನ್ ರೆಡ್ಡಿ ಯಾಳಗಿ ಮಾತನಾಡಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ್ ವಿಭೂತಿಹಳ್ಳಿ, ಹಿರಿಯ ವೈದ್ಯ ಡಾ. ಚಂದ್ರಶೇಖರ್ ಸುಬೇದಾರ್, ಮಂಡಲ ಅಧ್ಯಕ್ಷ ರಾಜುಗೌಡ ಉಕ್ಕಿನಾಳ, ನಗರ ಮಂಡಲ ಅಧ್ಯಕ್ಷ ದೇವೇಂದ್ರ ಕೊನೇರ, ಜಿಲ್ಲಾ ಕಾರ್ಯದರ್ಶಿ ಗುರುಕಾಮಾ, ಶಿವರಾಜ ದೇಶಮುಖ್, ರಾಜಶೇಖರ್ ಗೂಗಲ್, ಮಲ್ಲಿಕಾರ್ಜುನ, ಹನುಮಂತ ಇಟಗಿ, ಬಾಲಕೃಷ್ಣ, ತಿರುಪತಿ ಹಟ್ಟಿ ಕಟ್ಟಿಗಿ, ರಾಘವೇಂದ್ರ ಯಕ್ಷಿಂತಿ ಸೇರಿದಂತೆ ಇತರರಿದ್ದರು.