ವಿಡಿಯೋ ಕಾನ್ಫರೆನ್ಸ್ ಮೂಲಕ ಬರ ಪರಿಹಾರ ಪರಿಶೀಲನೆ

| Published : May 07 2024, 01:02 AM IST

ಸಾರಾಂಶ

ಬರಪರಿಹಾರ ಕುರಿತಂತೆ ಕಂದಾಯ ಇಲಾಖೆ ಕಾರ್ಯದರ್ಶಿ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್ ಸೇರಿ ಅಧಿಕಾರಿಗಳು ಪಾಲ್ಗೊಂಡಿದ್ದರು.

ಕನ್ನಡಪ್ರಭವಾರ್ತೆ, ಚಿತ್ರದುರ್ಗ

ನಗರದ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಸೋಮವಾರ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಬರಪರಿಹಾರ ಹಾಗೂ ಪ್ರಕೃತಿ ವಿಕೋಪ ವಿಷಯಗಳಿಗೆ ಸಂಬಂಧಿಸಿದಂತೆ ವಿಡಿಯೋ ಕಾನ್ಪರೆನ್ಸ್ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಬರ ಪರಿಸ್ಥಿತಿ ನಿರ್ವಹಣೆ ಕುರಿತು ಕೈಗೊಂಡಿರುವ ಕ್ರಮಗಳ ಕುರಿತು, ಬಾಕಿ ಬೆಳೆಹಾನಿ ಪರಿಹಾರ ವಿತರಣೆ, ಮುಂಗಾರು-2024ಕ್ಕೆ ಸಂಬಂಧಿಸಿದಂತೆ ಜಿಲ್ಲೆಗಳಲ್ಲಿ ಕೈಗೊಂಡಿರುವ ಪೂರ್ವಸಿದ್ಧತೆ ಹಾಗೂ ಗುಡುಗು ಸಿಡಿಲು, ಮಳೆ ಮತ್ತು ಇತರೆ ಪ್ರಕೃತಿ ವಿಕೋಪದಿಂದ ಉಂಟಾಗುವ ಹಾನಿಯನ್ನು ತಡೆಯಲು ಕೈಗೊಂಡ ಕ್ರಮಗಳು ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಎಡಿಸಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಸೇರಿದಂತೆ ತಹಸೀಲ್ದಾರ್ ಅಧಿಕಾರರಿಗಳು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಕಾರ್ಯಪಾಲಕ ಅಭಿಯಂತರರು, ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಇದ್ದರು.