ಕೆರೆಗೆ ನೀರು ಹರಿಸಲು ಆಗ್ರಹಿಸಿ ಕೆರೆಯಲ್ಲೇ ಟೆಂಟ್ ಹಾಕಿ ಪ್ರತಿಭಟನೆಕನ್ನಡಪ್ರಭ ವಾರ್ತೆ ವಿಜಯಪುರ ಜಂಬಗಿ ಕೆರೆ ನೀರು ತುಂಬಿಸುವಂತೆ ಆಗ್ರಹಿಸಿ ನೂರಾರು ರೈತರು ಕೆರೆಯಲ್ಲಿ ಟೆಂಟ್ ಹಾಕಿ ಹಸಿರು ಧ್ವಜ ಹಿಡಿದು ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸಿದರು. ಜಿಲ್ಲಾಧಿಕಾರಿ ಹಾಗೂ ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾಗೂ ಜಂಬಗಿ, ಆಹೇರಿ, ಅಂಕಲಗಿ, ಹುಣಶ್ಯಾಳ, ಮಾದಾಳ ಗ್ರಾಮದ ರೈತರು ಅನಿರ್ದಿಷ್ಟ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದರು.