ರಾಹುಲ್‌ ಗಾಂಧಿ ಪ್ರಧಾನಿ ಹುದ್ದೆಗೆ ಅನ್‌ಫಿಟ್: ಅಮಿತ್‌ ಶಾ

| Published : May 06 2024, 12:31 AM IST / Updated: May 06 2024, 04:45 AM IST

ಸಾರಾಂಶ

ಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎನ್‌ಡಿಎ 400 ಸ್ಥಾನಗಳ ಗಡಿಯತ್ತ ಸಾಗುವುದು ನಿಶ್ಚಿತವಾಗಿದೆ. ಇಡೀ ದೇಶವೇ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಲು ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ಧರ್ಮಾವರಂ (ಆಂಧ್ರಪ್ರದೇಶ): ಮೂರನೇ ಹಂತದ ಲೋಕಸಭಾ ಚುನಾವಣೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎನ್‌ಡಿಎ 400 ಸ್ಥಾನಗಳ ಗಡಿಯತ್ತ ಸಾಗುವುದು ನಿಶ್ಚಿತವಾಗಿದೆ. ಇಡೀ ದೇಶವೇ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಲು ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. 

ಆಂಧ್ರಪ್ರದೇಶದ ಧರ್ಮಾವರಂನಲ್ಲಿ ಎನ್‌ಡಿಎ ರ್‍ಯಾಲಿ ಉದ್ದೇಶಿಸಿ ಭಾನುವಾರ ಮಾತನಾಡಿದ ಅವರು, ರಾಹುಲ್ ಗಾಂಧಿ ಸೇರಿದಂತೆ ಭಾರತದ ಯಾವೊಬ್ಬ ಇಂಡಿಯಾ ಕೂಟದ ನಾಯಕರೂ ದೇಶವನ್ನು ಮುನ್ನಡೆಸಲು ಯೋಗ್ಯರಲ್ಲ. ಹೀಗಾಗಿ ಜನರು ನರೇಂದ್ರ ಮೋದಿ ಅವರನ್ನು ಮತ್ತೆ ಆಯ್ಕೆ ಮಾಡಲು ದೃಢನಿಶ್ಚಯ ಮಾಡಿದ್ದಾರೆ ಎಂದರು.

ಇದೇ ವೇಳೆ ಲೋಕಸಭೆ ಚುನಾವಣೆ ಜತೆಗೆ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ನಡೆಯುತ್ತಿರುವುದನ್ನೂ ಪ್ರಸ್ತಾಪಿಸಿದ ಅವರು, ‘ನಾನು ನಿಮಗೆ ಮೋದಿ ಗ್ಯಾರಂಟಿ ನೀಡಲು ಬಂದಿದ್ದೇನೆ. ನೀವು ಆಂಧ್ರಪ್ರದೇಶದಲ್ಲಿ ಎನ್‌ಡಿಎ ಪಾಲುದಾರರಾದ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಮತ್ತು ಕೇಂದ್ರದಲ್ಲಿ ನರೇಂದ್ರ ಮೋದಿಗೆ ಮತ ನೀಡಿ. ಆಂಧ್ರಪ್ರದೇಶದ ಸಕಲ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ’ ಎಂದರು.

ಇದೇ ವೇಳೆ, ಆಂಧ್ರದಲ್ಲಿ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆದಿರುವ ವೈಎಸ್ಸಾರ್‌ ಕಾಂಗ್ರೆಸ್‌ ನಾಯಕ ಜಗನ್ಮೋಹನ ರೆಡ್ಡಿ ನಡೆ ವಿರೋಧಿಸಿದ ಅವರು, ಇಂಥದ್ದಕ್ಕೆ ಬಿಜೆಪಿ ಅವಕಾಶ ನೀಡಲ್ಲ ಎಂದರು.