ಅರಣ್ಯ ಒತ್ತುವರಿಯಾಗುವುದನ್ನು ತಡೆಯಲು ಉಪಗ್ರಹ ಕಣ್ಗಾವಲು ವ್ಯವಸ್ಥೆ ‘ಅರಣ್ಯ ಹೊದಿಕೆ ಬದಲಾವಣೆ ಮುನ್ನೆಚ್ಚರಿಕೆ ವ್ಯವಸ್ಥೆ’ಯನ್ನು ಸಮರ್ಪಕವಾಗಿ ಬಳಸಿಕೊಂಡು, ಒತ್ತುವರಿ ತಡೆ ಹಾಗೂ ಒತ್ತುವರಿದಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದರು.
ಒಂಟಿ ಆನೆಯನ್ನು ಹೆಜ್ಜೆ ಗುರುತಿನ ಆಧಾರದ ಮೇಲೆ ಅರಣ್ಯ ಇಲಾಖೆ, ಎಲಿಫೆಂಟ್ ಟಾಸ್ಕ್ ಪೋರ್ಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೂಲ ಸ್ಥಾನಕ್ಕೆ ಹಿಮ್ಮೆಟ್ಟಿಸಿದ್ದಾರೆ.