ಆನೆ ಮತ್ತು ಮಾನವ ಸಂಘರ್ಷ ನಿಯಂತ್ರಣಕ್ಕೆ ಆನೆಧಾಮ ನಿರ್ಮಿಸಿ

Nov 13 2025, 12:15 AM IST
ಕರ್ನಾಟಕದಲ್ಲಿ ಆನೆಗಳ ಮತ್ತು ಮಾನವನ ನಡುವಿನ ಸಂಘರ್ಷ ಹಲವಾರು ವರ್ಷಗಳಿಂದಲೂ ನಡೆಯುತ್ತಿದ್ದು, ಪಶ್ಚಿಮ ಘಟ್ಟದಂಚಿನಲ್ಲಿ ವಾಸಿಸುವ ರೈತರು ಮತ್ತು ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ರಾಜ್ಯ ಸರಕಾರವು ಕೂಡಲೇ ಶ್ರೀಲಂಕಾ ಮಾದರಿಯ ಆನೆಧಾಮಗಳನ್ನು ನಿರ್ಮಾಣ ಮಾಡುವ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಈ ನಿಟ್ಟಿನಲ್ಲಿ ಇನ್ನು ಮೂರು ದಿನದಲ್ಲಿ ಮುಖ್ಯಮಂತ್ರಿಗಳ ಭೇಟಿ ಮಾಡುವುದಾಗಿ ಮಾಜಿ ಶಾಸಕ ಎಚ್. ಎಂ. ವಿಶ್ವನಾಥ್ ತಿಳಿಸಿದರು. ರಾಜ್ಯದ ಪಶ್ಚಿಮಘಟ್ಟ ವ್ಯಾಪ್ತಿಯ ಜಿಲ್ಲೆಗಳಲ್ಲಿ ಹಾಸನ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಕಳೆದ ಎರಡು ದಶಕಗಳಲ್ಲಿ ಆನೆ-ಮಾನವ ಸಂಘರ್ಷ ಗಂಭೀರ ಹಂತ ತಲುಪಿದೆ ಎಂದು ವಿಷಾದ ವ್ಯಕ್ತಪಡಿಸಿದರು.