ಆಯುಷ್ಮಾನ್ ಭಾರತ್ ಕಾರ್ಡ್ ನೋಂದಣಿ ಕಾರ್ಯಕ್ಕೆ ಚಾಲನೆ
Dec 07 2024, 12:31 AM IST೭೦ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಐದು ಲಕ್ಷ ರುಪಾಯಿ ಆರೋಗ್ಯ ವಿಮೆ ಸೌಲಭ್ಯ ಯೋಜನೆ ರೂಪಿಸಲಾಗಿದ್ದು, ಎಪಿಎಲ್ ಅಥವಾ ಬಿಪಿಎಲ್ ಎಂಬ ತಾರತಮ್ಯವಿಲ್ಲದೇ, ಆದಾಯ ಲೆಕ್ಕಿಸದೇ ಪ್ರತಿಯೊಬ್ಬ ಹಿರಿಯ ನಾಗರಿಕರು ಈ ಯೋಜನೆಯ ಸೌಲಭ್ಯ ಪಡೆಯಬಹುದಾಗಿದೆ. ಜತೆಗೆ ನೋಂದಣಿ ಮುಖ್ಯವಾಗಿರುತ್ತದೆ ಎಂದು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಧನಶೇಖರ್ ಸಲಹೆ ನೀಡಿದರು. ಆಯುಷ್ಮಾನ್ ಭಾರತ್ ಕಾರ್ಡ್ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.