ಮೇ 1ರಿಂದ ಆರ್ಥಿಕ ಹಾಗೂ ವಿವಿಧ ವಲಯಗಳಲ್ಲಿ ಹಲವು ಬದಲಾವಣೆ ಆಗಲಿವೆ. ಇವುಗಳಲ್ಲಿ ಕೆಲವು ಜನರ ಜೇಬು ಸುಡಲಿವೆ. ಇನ್ನು ಕೆಲವು ನಿರ್ಧಾರ ಗ್ರಾಹಕರಿಗೆ ಅನುಕೂಲವಾಗಲಿವೆ.
ರಾಷ್ಟ್ರೀಯ ಜನಗಣತಿ ಜೊತೆ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸುವಂತೆ ಇದೇ ವೇಳೆ ಒತ್ತಾಯಿಸಿದ್ದಾರೆ.