ಜಾಗತಿಕ ಆರ್ಥಿಕ ಮಾರುಕಟ್ಟೆ ಅಸ್ಥಿರವಾಗಿ, ಚಿನ್ನದ ಬೆಲೆ 3ನೇ ಒಂದರಷ್ಟು ಏರಿಕೆ ಕಂಡಿರುವ ಈ ಹೊತ್ತಿನಲ್ಲಿ, ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಕಳೆದ ಹಣಕಾಸು ವರ್ಷದಲ್ಲಿ ಬರೋಬ್ಬರಿ 57.5 ಟನ್ ಚಿನ್ನವನ್ನು ಖರೀದಿಸಿದೆ.
ಮಂದಗತಿಯಲ್ಲಿ ಸಾಗುತ್ತಿರುವ ದೇಶದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಕೇಂದ್ರ ಸರ್ಕಾರದ ಯೋಜನೆಯ ಭಾಗವಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ರೆಪೋ ದರ (ಬ್ಯಾಂಕುಗಳಿಗೆ ಆರ್‌ಬಿಐ ನೀಡುವ ಸಾಲದ ಮೇಲಿನ ಬಡ್ಡಿ ದರ)ವನ್ನು ಶೇ.6.50 ರಿಂದ ಶೇ.6.25ಕ್ಕೆ ಇಳಿಸುವ ಘೋಷಣೆ ಮಾಡಿದೆ.
ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಮೀಟರ್ ಬಡ್ಡಿ ದಂಧೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುವವರ ವಿರುದ್ಧ ಮುಖ್ಯಮಂತ್ರಿಗಳೇ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಈ ಕಾನೂನುಗಳು ಕಠಿಣಗೊಳ್ಳಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು.
ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಬುಧವಾರ ತನ್ನ ದ್ವೈಮಾಸಿಕ ಸಾಲ ನೀತಿ ಪ್ರಕಟಿಸಿದ್ದು, ರೆಪೋ ದರವನ್ನು ಶೇ.6.5ರಲ್ಲೇ ಕಾಯ್ದುಕೊಳ್ಳಲು ನಿರ್ಧರಿಸಿದೆ. ಹೀಗಾಗಿ ಗೃಹ, ವಾಹನ ಸೇರಿದಂತೆ ಇತರೆ ಸಾಲದ ಬಡ್ಡಿದರ ಮತ್ತು ಠೇವಣಿಗಳ ಮೇಲಿನ ಬಡ್ಡಿದರ ಹಾಲಿ ದರದಲ್ಲೇ ಮುಂದುವರೆಯಲಿದೆ.