ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಆರ್‌ಐಡಿಎಲ್) ಕಚೇರಿಯಲ್ಲಿ ಕೆಲ ವರ್ಷ ಹೊರಗುತ್ತಿಗೆ ಆಧಾರದಲ್ಲಿ ಸಹಾಯಕನಾಗಿದ್ದ ಕಳಕಪ್ಪ ನಿಡಗುಂದಿ ಪ್ರತಿ ತಿಂಗಳು ₹15 ಸಾವಿರ ವೇತನ ಪಡೆಯುತ್ತಿದ್ದ. ಆದರೆ, ಇತನ ನೂರಾರು ಕೋಟಿ ಆಸ್ತಿ ನೋಡಿದ ಲೋಕಾಯುಕ್ತ ಅಧಿಕಾರಿಗಳೇ ಬೆರಗಾಗಿದ್ದಾರೆ.
ನಗರದ ಕೆಆರ್‌ಐಡಿಎಲ್ ನಲ್ಲಿ ಕೆಲ ವರ್ಷ ಹೊರಗುತ್ತಿಗೆ ಕಚೇರಿ ಸಹಾಯಕನಾಗಿ ಸೇವೆ ಸಲ್ಲಿಸಿದ್ದ ಕಳಕಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಈ ವೇಳೆ 24 ಮನೆಗಳು, 50 ನಿವೇಶನ, 40 ಎಕರೆ ಜಮೀನು, ಬಂಗಾರ, ಬೆಳ್ಳಿ ಸೇರಿದಂತೆ 100 ಕೋಟಿ ರು.ಗೂ ಹೆಚ್ಚಿನ ಮೌಲ್ಯದ ಆಸ್ತಿ ಪತ್ತೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸದ 3.75 ಲಕ್ಷ ಸುಸ್ತಿದಾರರಿಗೆ ನೋಟಿಸ್ ಜಾರಿ ಮಾಡಿ, ಬಾಕಿ ತೆರಿಗೆ ವಸೂಲಿ ಮಾಡಲು ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚಿಸಿದರು.