ಆ.1,2ರಂದು ಆಳ್ವಾಸ್ ಪ್ರಗತಿ: 285ಕ್ಕೂ ಅಧಿಕ ಕಂಪೆನಿಗಳು, 15 ಸಾವಿರಕ್ಕೂ ಅಧಿಕ ಉದ್ಯೋಗ ಅವಕಾಶ
Jul 28 2025, 12:47 AM IST, ಆಳ್ವಾಸ್ ಪ್ರಗತಿ 15ನೇ ಆವೃತ್ತಿಯನ್ನು ಆ.1ರಂದು ಬೆಳಗ್ಗೆ 9.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸುವರು. ಮಂಗಳೂರು ವಿವಿ ಕುಲಪತಿ ಡಾ.ಪಿ.ಎಲ್. ಧರ್ಮ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಶಾಸಕ ಉಮಾನಾಥ ಎ. ಕೋಟ್ಯಾನ್ ಅಧ್ಯಕ್ಷತೆ ವಹಿಸುತ್ತಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹಾಗೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಸಕರು ಭಾಗವಹಿಸಲಿದ್ದಾರೆ.