ಪಾಲಿಕೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಜಯಭೇರಿ
Nov 27 2024, 01:05 AM ISTವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ವಾರ್ಡ್ ನಂ.೨೯ಕ್ಕೆ ನಡೆದ ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಗಿರೀಶ್ ವಿಜಯಕುಮಾರ ಪಾಟೀಲ ೨೭೫೪ ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ. ವಾರ್ಡ್ ನಂ.೨೯ಕ್ಕೆ ನಡೆದ ಉಪ ಚುನಾವಣೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಭಾಗಪ್ಪ ಏಳಗಂಟಿ ೧೭೬೨ ಮತಗಳನ್ನು ಪಡೆದಿದ್ದು, ೩೮ ನೋಟಾ ಚಲಾವಣೆಯಾಗಿವೆ ಎಂದು ಉಪ ಚುನಾವಣೆ ಚುನಾವಣಾಧಿಕಾರಿ ವಿನಯಕುಮಾರ ಪಾಟೀಲ ಪ್ರಕಟಿಸಿದರು.