ಸಿಬಿಎಸ್ಇ ಮಾದರಿಯಲ್ಲಿ ರಾಜ್ಯದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲೂ ಪಾಸ್ ಅಂಕಗಳ ಪ್ರಮಾಣವನ್ನು ಆಂತರಿಕ ಮೌಲ್ಯಮಾಪನದ ಅಂಕಗಳನ್ನೊಳನ್ನು ಸೇರಿಸಿ ಶೇ.33ಕ್ಕೆ ಇಳಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಕರಡು ನಿಯಮಾವಳಿ ಅಧಿಸೂಚನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ
ರಾಜ್ಯದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆಗೆ ರಾಜ್ಯ ಸರ್ಕಾರ ಗುರುವಾರ ಕರಡು ನಿಯಮಾವಳಿ ಪ್ರಕಟಿಸಿದ್ದು, ಎಸ್ಸೆಸ್ಸೆಲ್ಸಿ ಪಾಸಾಗಲು ಲಿಖಿತ ಪರೀಕ್ಷೆ ಮತ್ತು ಆಂತರಿಕ ಮೌಲ್ಯಮಾಪನ ಎರಡೂ ಸೇರಿ ಶೇ.33 ಅಂಕ ಪಡೆದರೆ ಸಾಕೆಂದು ಹೇಳಿದೆ.
ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಕಳೆದ ಎರಡು ವರ್ಷಗಳಿಂದಷ್ಟೇ ಪರಿಚಯಿಸಿದ್ದ ‘ವರ್ಷಕ್ಕೆ ಮೂರು ಪರೀಕ್ಷೆ’ ನಡೆಸುವ ವ್ಯವಸ್ಥೆ ಪರಿಷ್ಕರಿಸಿ ‘ಪರೀಕ್ಷೆ-3’ಅನ್ನು ಕೈಬಿಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ
ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ಮೊಬೈಲ್ ಫೋನ್ ಸೀಮಿತ ಉದ್ದೇಶಕ್ಕೆ ಬಳಸಬೇಕು, ಜುಲೈನಿಂದಲೇ ಪ್ರತಿ ದಿನ ಶಾಲಾ ಅವಧಿಯ ಮೊದಲು ವಿಶೇಷ ತರಗತಿ ನಡೆಸಬೇಕು, ಮಾದರಿ ಪ್ರಶ್ನೆಪತ್ರಿಕೆಗಳಿಗೆ ಉತ್ತರ ಬರೆಸಬೇಕು ಎಂಬುದು ಸೇರಿ ಎಸ್ಸೆಸ್ಸೆಲ್ಸಿ ಫಲಿತಾಂಶ ವೃದ್ಧಿಗಾಗಿ 29 ಅಂಶಗಳ ಮಾರ್ಗಸೂಚಿ
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಮ್ಮ ಶಾಲೆ ಶೇಕಡ 100ರಷ್ಟು ಫಲಿತಾಂಶ ಪಡೆದುಕೊಳ್ಳಬೇಕೆಂದು ಖಾಸಗಿ ಶಾಲೆಗಳು 9ನೇ ತರಗತಿ ತೇರ್ಗಡೆಯಾಗಿ 10ನೇ ತರಗತಿಗೆ ಬರುವ ಮುನ್ನವೇ ‘ಜಾಣರಿಲ್ಲ’ ಎನ್ನುವ ಕಾರಣಕ್ಕೆ ಶಾಲೆಯಿಂದ ಕೆಲ ವಿದ್ಯಾರ್ಥಿಗಳನ್ನು ಆಚೆ ಅಟ್ಟುತ್ತಿದ್ದಾರೆ.