ಐಟಿ-ಬಿಟಿ ಇಲಾಖೆ, ಕಿಯೋನಿಕ್ಸ್ ಸಹಯೋಗದಲ್ಲಿ ಕರ್ನಾಟಕದ ಸ್ಟಾರ್ಟಪ್‌ಗಳು ನಿರ್ಮಿಸಿರುವ ಕೃತಕ ಬುದ್ಧಿಮತ್ತೆ ಆಧಾರಿತ ‘ಕಿಯೋ’ (ಕೆಇಒ) ಹೆಸರಿನ ಕಂಪ್ಯೂಟರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಬೆಂಗಳೂರು ಟೆಕ್ ಸಮ್ಮಿಟ್-2025ರ ಉದ್ಘಾಟನಾ ಸಮಾರಂಭದಲ್ಲಿ ಬಿಡುಗಡೆ ಮಾಡಲಿದ್ದಾರೆ.
ಸ್ವಾತಂತ್ರ್ಯಪೂರ್ವದಲ್ಲಿ ಆರಂಭಗೊಂಡ ಇಲ್ಲಿನ ಕರ್ನಾಟಕ ಸಂಘ, ಅಂದಿನಿಂದ ಇಂದಿನವರೆಗೂ ಕನ್ನಡ ಸೇವೆಯನ್ನು ನಿರಂತರವಾಗಿ ಮುಂದುವರಿಸಿಕೊಂಡು ಬರುತ್ತಿದೆ. ಸಾಹಿತ್ಯ, ಜನಪದ, ಸಂಘಟನೆ, ಭಾಷೆ ಬೆಳವಣಿಗೆ ಸೇರಿದಂತೆ ಕನ್ನಡ ಭಾಷೆಯ ಎಲ್ಲಾ ಸ್ತರಗಳಲ್ಲೂ ಅತ್ಯುತ್ತಮವಾಗಿ ಕೆಲಸ ನಿರ್ವಹಿಸುತ್ತಾ ಗಮನ ಸೆಳೆದಿದೆ.