ಸಿಎಂ ಕುರ್ಚಿ ಚರ್ಚೆಯಲ್ಲೆ ದಿನ ನೂಕುತ್ತಿರುವ ಕಾಂಗ್ರೆಸ್ ಸರ್ಕಾರ-ಸಂಸದ ಬೊಮ್ಮಾಯಿ
Nov 03 2025, 02:15 AM ISTರಾಜ್ಯ ಸರ್ಕಾರದ ನವೆಂಬರ್ ರಾಜಕೀಯ ಕ್ರಾಂತಿ ಖಾಸಗಿ ವ್ಯವಹಾರವಾಗಿದ್ದು, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಾವಿಬ್ಬರೇ ಮಾತನಾಡಿಕೊಳ್ಳುತ್ತೇವೆ ಎಂದು ವ್ಯವಹಾರ ಮಾಡಿಕೊಂಡಿದ್ದಾರೆ. ಉಳಿದ ಮಂತ್ರಿ, ಶಾಸಕರಿಗೆ ಸಂಬಂಧವೇ ಇಲ್ಲ ಎನ್ನುವಂತಾಗಿದೆ. ಈ ಸರ್ಕಾರ ಬಂದಾಗಿನಿಂದ ಸಿಎಂ ಬದಲಾವಣೆ ಚರ್ಚೆಯಲ್ಲಿಯೇ ದಿನ ನೂಕುತ್ತ ರಾಜ್ಯದ ಅಭಿವೃದ್ಧಿ ಶೂನ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.