ಉತ್ತರ ಕನಾಟದ ಬಹಳಷ್ಟು ಜನರ ಬೇಡಿಕೆಯಾಗಿರುವ ಕಾರವಾರ-ಇಳಕಲ್ಲ (ಕೈಗಾ) ರಾಷ್ಟ್ರೀಯ ಹೆದ್ದಾರಿಯನ್ನು ಶೀಘ್ರ ಮಂಜೂರು ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸಚಿವ ನೀತಿನ ಗಡ್ಕರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಪಹಲ್ಗಾಂ ಘಟನೆಗೆ ಪ್ರತಿಯಾಗಿ ಭಾರತವು ಪಾಕಿಸ್ತಾನದ ಉಗ್ರರ ಅಡಗುತಾಣಗಳ ಮೇಲೆ ಆಪರೇಷನ್ ಸಿಂದೂರ ಹೆಸರಿನಲ್ಲಿ ನಡೆಸಿದ ವಾಯು ದಾಳಿಯಿಂದ ಯುದ್ಧ ಉನ್ಮಾದ ಉಂಟಾಗಿರುವ ಹಿನ್ನೆಲೆಯಲ್ಲಿ ಕಾರವಾರದ ಬಂದರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.