ಕರ್ನಾಟಕ ಪ್ರದೇಶ ಕುರುಬರ ಸಂಘದ ಪದಾಧಿಕಾರಿಗಳು ಕುಮಾರಸ್ವಾಮಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ.
ಚಲುವರಾಯಸ್ವಾಮಿಗೆ ಇರುವ ಚಟಗಳು ನನಗಿಲ್ಲ. ಅವರಿಗಿರುವ ಚಟಗಳ ಬಗ್ಗೆ ಮಂಡ್ಯದಲ್ಲಿ ಕೇಳಿದರೆ ಹೇಳುತ್ತಾರೆ. ಚಲುವರಾಯಸ್ವಾಮಿಯಿಂದ ಎಷ್ಟು ಮನೆ ಹಾಳಾಗಿವೆ ಎನ್ನುವುದೂ ಗೊತ್ತಿದೆ. ಚಟಗಳ ಬಗ್ಗೆ ಚರ್ಚೆ ಮಾಡೋದು ಬೇಡ, ಅದು ಕೀಳುಮಟ್ಟದ ಅಭಿರುಚಿ ಎಂದು ಮಂಡ್ಯದಲ್ಲಿ ಮಾತನಾಡುತ್ತಾ ತಿಳಿಸಿದರು.
ದೇಶದ ಗಡಿ ಬಗ್ಗೆ ಸಚಿವ ಸಂತೋಷ ಲಾಡ್ ವಿಚಾರ ಮಾಡಿ ಮಾತನಾಡಬೇಕು. ಈ ವಿಚಾರದಲ್ಲಿ ನಮ್ಮನ್ನು, ನಮ್ಮ ಸರ್ಕಾರ ನಂಬದೇ ಇದ್ದರೂ ಸೈನ್ಯವನ್ನು ನಂಬಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದವರು ಲಜ್ಜೆಗೆಟ್ಟಿದ್ದಾರೆ. ರಾಹುಲ್ಗಾಂಧಿ, ಪ್ರಿಯಾಂಕ ವಾದ್ರಾ ಓಲೈಕೆಗಾಗಿ ರಾತ್ರಿ ವೇಳೆ ಬಂಡಿಪುರದಲ್ಲಿ ವಾಹನ ಸಂಚಾರಕ್ಕೆ ಒಪ್ಪಿದ್ದಾರೆ, ಮುಸ್ಲಿಮರ ಓಲೈಕೆಗೂ ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.