ಆಲೆಮನೆ, ಒಂಟಿಮನೆಯಿಂದ, ಆರೋಗ್ಯ ಇಲಾಖೆ ವಸತಿಗೃಹಕ್ಕೆ...!
May 07 2024, 01:08 AM ISTಮಂಡ್ಯ ತಾಲೂಕಿನ ಹಾಡ್ಯ ಸಮೀಪದ ಆಲೆ ಮನೆಯೊಂದರಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಪ್ರಕರಣ ಬೆಳಕಿಗೆ ಬಂದಿತು. ಅದನ್ನು ಸಿಐಡಿ ತನಿಖಾ ಸಂಸ್ಥೆಗೆ ಒಪ್ಪಿಸಲಾಯಿತೇ ವಿನಃ ಆ ಪ್ರಕರಣ ಸದ್ಯ ಯಾವ ಹಂತದಲ್ಲಿದೆ, ಎಷ್ಟು ಜನರನ್ನು ಬಂಧಿಸಲಾಯಿತು. ಎಷ್ಟು ಜನರಿಗೆ ಶಿಕ್ಷೆಯಾಯಿತು. ತನಿಖೆಯಿಂದ ಕಂಡುಕೊಂಡ ಮಹತ್ವದ ಸಂಗತಿಗಳೇನು. ಪ್ರಕರಣ ಮುಕ್ತಾಯಗೊಂಡಿತೋ, ಇಲ್ಲವೋ ಎನ್ನುವುದು ಯಾರಿಗೂ ಗೊತ್ತೇ ಇಲ್ಲ.