ಎತ್ತಿನ ಭುಜಕ್ಕೆ ಚಾರಣ ಬಂದ್
Jul 02 2025, 12:21 AM ISTಚಿಕ್ಕಮಗಳೂರು, ಮಲೆನಾಡು ಭಾಗದಲ್ಲಿ ಮುಂಗಾರು ಪೂರ್ವದಿಂದಲೂ ಮಳೆ ನಿರಂತರವಾಗಿ ಸುರಿಯುತ್ತಲೇ ಇದೆ. ಧಾರಾಕಾರ ಮಳೆ ಯಿಂದಾಗಿ ಮಲೆನಾಡು ಅಕ್ಷರಶಃ ಮಳೆ ನಾಡಾಗಿ ಪರಿವರ್ತನೆಯಾಗಿದೆ. ಹೀಗಾಗಿ ಪ್ರವಾಸೋದ್ಯಮಕ್ಕೆ ಹೆಸರು ವಾಸಿಯಾಗಿರುವ ಚಿಕ್ಕಮಗಳೂರಿನ ಒಂದೊಂದೇ ಪ್ರಮುಖ ಪ್ರವಾಸಿ ತಾಣಗಳಿಗೆ ಮಳೆಗಾಲದ ಅವಧಿಯಲ್ಲಿ ನಿರ್ಬಂಧ ಬೀಳುವ ಸಾಧ್ಯತೆ ದಟ್ಟವಾಗಿದೆ. ಇದರ ಮೊದಲ ಭಾಗವಾಗಿ ಪ್ರವಾಸಿಗರ ಸ್ವರ್ಗ ಎಂದೇ ಖ್ಯಾತಿ ಪಡೆದಿರುವ ಮೂಡಿಗೆರೆ ತಾಲೂಕಿನ ಎತ್ತಿನ ಭುಜಕ್ಕೆ ಒಂದು ತಿಂಗಳ ಕಾಲ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ.