ಫೇಸ್‌ಬುಕ್ಕಲ್ಲಿ ರಾಜಕೀಯ ಜಾಹೀರಾತು ಸ್ಥಗಿತ: ಯುರೋಪ್‌ನಲ್ಲಿ ಜಾರಿ
Jul 27 2025, 12:06 AM ISTಫೇಸ್‌ಬುಕ್, ಇನ್ಸ್ಟಾಗ್ರಾಂ, ವಾಟ್ಸಾಪ್‌ನ ಮಾತೃಸಂಸ್ಥೆಯಾದ ‘ಮೆಟಾ’, ಯುರೋಪ್ ದೇಶಗಳಲ್ಲಿ ಚುನಾವಣೆ, ರಾಜಕೀಯ, ಸಾಮಾಜಿಕ ಸಮಸ್ಯೆಗಳ ಕುರಿತಾದ ಜಾಹೀರಾತು ಪ್ರಸಾರ ಸ್ಥಗಿತ ಮಾಡುವುದಾಗಿ ಘೋಷಿಸಿದೆ. ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಚುನಾವಣೆಯ ದಿಕ್ಕನ್ನೇ ಬದಲಾಯಿಸಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಈ ಬೆಳವಣಿಗೆ ನಡೆದಿದೆ.