ರಸ್ತೆ ಗುಂಡಿ ಸಮಸ್ಯೆ, ಮೂಲ ಸೌಕರ್ಯ ಕೊರತೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದ ನಗರದ ಪ್ರಮುಖ ಉದ್ಯಮಿಗಳೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಭೆ ನಡೆಸಿ, ನಗರದ ಸಮಸ್ಯೆಗಳ ಪರಿಹಾರಕ್ಕೆ ಕ್ರಿಯಾಯೋಜನೆ ರೂಪಿಸುವ ಸಂಬಂಧ ಚರ್ಚೆ ನಡೆಸಿದ್ದಾರೆ.
ಮುಂದಿನ ದಿನಗಳಲ್ಲಿ ಆನೇಕಲ್ ಭಾಗ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಸೇರಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು . ಈಗಾಗಲೇ ಆನೇಕಲ್‌ಗೆ ಕಾವೇರಿ ಕುಡಿಯುವ ನೀರನ್ನು ನೀಡಲಾಗುತ್ತಿದೆ. ಭವಿಷ್ಯದಲ್ಲಿ ನೀಡಬೇಕಾದ ಸವಲತ್ತುಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
‘ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನದ ವಿಚಾರ ಸಂಖ್ಯಾಬಲದಿಂದ ನಿರ್ಧಾರವಾಗುವುದಿಲ್ಲ, ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುರಂಗ ರಸ್ತೆ ಯೋಜನೆಯಿಂದ ಲಾಲ್‌ಬಾಗ್‌ಗೆ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳಿ, ಕಟ್ಟಡ ನಿರ್ಮಾಣ ಪರವಾನಗಿ, ಸ್ವಾಧೀನಾನುಭವ ಪ್ರಮಾಣ ಪತ್ರದ ಸಮಸ್ಯೆ ಪರಿಹರಿಸಿ, ಕಸ ಸಂಗ್ರಹ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುವುದರಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ
ರಾಜ್ಯದಲ್ಲಿ ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆ ಹಾಗೂ ಅಧಿಕಾರ ಹಂಚಿಕೆ ಯಾವುದೂ ಇಲ್ಲ. ಇಂಥ ಯಾವುದೇ ಚರ್ಚೆಯೂ ನಡೆದಿಲ್ಲ. ಚರ್ಚೆ ನಡೆದಿದೆ ಎಂಬುದು ಗಾಳಿ ಸುದ್ದಿಯಷ್ಟೆ. ನವೆಂಬರ್ ಕ್ರಾಂತಿ ಸಾಧ್ಯತೆ ಅಲ್ಲಗಳೆದ ಉಪಮುಖ್ಯಮಂತ್ರಿ