ಮೇಕೆದಾಟು ಯೋಜನೆಯಲ್ಲಿ ದೇವೇಗೌಡರು ಮಾತು ಉಳಿಸಿಕೊಂಡಿಲ್ಲ

Jul 21 2025, 12:00 AM IST
ದೇವೇಗೌಡರು ಕೇಂದ್ರದಲ್ಲಿ ಮೋದಿ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಗೆ ಒಂದು ಗಂಟೆಯಲ್ಲಿ ಕೈ ಹಿಡಿದು ಸಹಿ ಹಾಕಿಸುತ್ತೇನೆ ಎಂದಿದ್ದರು. ಆದರೆ ಆ ಕೆಲಸ ಇದುವರೆಗೆ ಯಾಕೆ ಆಗಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ ನಡೆಸಿದರು. ಯುವ ಪರ್ವ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ , ಮೇಕೆದಾಟು ಯೋಜನೆಗೆ ಅನುಮೋದನೆ ನೀಡಬೇಕಾದರೆ ಕೇಂದ್ರದಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಮಾತ್ರ ಸಾಧ್ಯ. ಅವರು ಪ್ರಧಾನಿಯಾದರೆ ಅವರ ಕೈಹಿಡಿದು ನಾನೇ ಒಂದು ಗಂಟೆಯೊಳಗೆ ಅನುಮೋದನೆ ಕೊಡಿಸುತ್ತೇನೆ ಎಂದು ರಾಜ್ಯ ಜನತೆಗೆ ಭರವಸೆ ನೀಡಿದ್ದರು. ಆದರೆ ಇಷ್ಟು ವರ್ಷವಾದರೂ ಯಾವುದೇ ಸಹಿ ಹಾಕಿಸಿಲ್ಲ ಎಂದರು.