ನಗರದ ಬೀದಿ ನಾಯಿಗಳ ಹಾವಳಿ ಇತ್ತೀಚೆಗೆ ಮೇರೆ ಮೀರುತ್ತಿದ್ದು, ವೃದ್ಧರು, ಮಕ್ಕಳು, ಮಹಿಳೆಯರು ರಸ್ತೆಯಲ್ಲಿ ಓಡಾಡುವುದು ಕಷ್ಟವಾಗಿದೆ. ಪ್ರತಿ ವರ್ಷ ಸರಾಸರಿ 20 ಸಾವಿರಕ್ಕೂ ಅಧಿಕ ಮಂದಿ ಬೀದಿ ನಾಯಿಗಳ ದಾಳಿಗೆ ತುತ್ತಾಗುವ ಭಯಾನಕ ಸ್ಥಿತಿ ಸೃಷ್ಟಿಯಾಗಿದೆ.
ಬೀದಿ ನಾಯಿಗಳಿಗೆ ವಿಶೇಷವಾಗಿ ತಯಾರಿಸಿದ ಭಕ್ಷ್ಯನೀಡುತ್ತಿಲ್ಲ, ಮಾನವ ಗುಣಮಟ್ಟದ ಆಹಾರವನ್ನು ಬೀದಿ ನಾಯಿಗಳಿಗೆ ನೀಡುವುದಿಲ್ಲ, ನಾಯಿ ದರ್ಜೆಯ ಆಹಾರ ನೀಡಲಾಗುವುದು ಎಂದು ಬಿಬಿಎಂಪಿ ಅಧಿಕೃತವಾಗಿ ಸ್ಪಷ್ಟಿಕರಣ ನೀಡಿದೆ.