ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
Aug 10 2025, 02:15 AM ISTಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಶನಿವಾರ ಉಡುಪಿ ಕೃಷ್ಣಮಠದಲ್ಲಿ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು ಭಾರತ ಲಕ್ಷ್ಮೀ ಬಿರುದು ನೀಡಿ ಸನ್ಮಾನಿಸಿದರು. ಪರ್ಯಾಯ ಪುತ್ತಿಗೆ ಮಠದಿಂದ ಕೃಷ್ಣಮಠದ ಮೇಲಂತಸ್ತಿನ ಪೌಳಿಗೆ ನೂತನ ಕಾಷ್ಟ ಯಾಳಿ ಅಲಂಕಾರವನ್ನು ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸಿದರು.