ಹರಳು ಯೂರಿಯಾ ಕಡಿಮೆ ಮಾಡಿ ನ್ಯಾನೋ ಯೂರಿಯಾ ಬಳಸಿ: ಶಾಸಕ ಷಡಕ್ಷರಿ
Oct 03 2025, 01:07 AM ISTಈ ಯೋಜನೆಯಡಿ ತಾಲೂಕಿನಲ್ಲಿ ೪೦೦ ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆಯ ಪ್ರಾತ್ಯಕ್ಷಿಕೆಯನ್ನು ಕೈಗೊಳ್ಳಲಾಗಿದೆ. ಯೂರಿಯಾದ ಅತಿಯಾದ ಬಳಕೆ ಮಣ್ಣಿನ ಆರೋಗ್ಯ, ಬೆಳೆ ಇಳುವರಿ ಮತ್ತು ಪರಿಸರದ ಮೇಲೆ ವಿವಿಧ ರೀತಿಯಲ್ಲಿ ಹಾನಿಕಾರಕವಾಗಲಿದ್ದು, ಹೆಚ್ಚಾಗಿ ಬಳಕೆ ಮಾಡಿದರೆ ಇಳುವರಿ ಕಡಿಮೆಯಾಗಿ ಪೋಷಕಾಂಶಗಳ ಅಸಮತೋಲನ ಉಂಟಾಗಬಹುದು. ಯೂರಿಯಾವನ್ನು ಮೇಲುಗೊಬ್ಬರವಾಗಿ ಬೆಳೆಗಳಿಗೆ ಎರಚುವುದು ಪ್ರಸ್ತುತ ಚಾಲ್ತಿಯಲ್ಲಿರುವ ವಿಧಾನವಾಗಿದೆ.