ಆರತಿ ಬೆಳಗಿ, ಹೂವು ನೀಡಿ ಪರೀಕ್ಷಾ ಕೇಂದ್ರಕ್ಕೆ ಸ್ವಾಗತ
Mar 22 2025, 02:03 AM ISTಕನ್ನಡಪ್ರಭ ವಾರ್ತೆ ವಿಜಯಪುರ ತಿಕೋಟಾ ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಮೊದಲ ದಿನದ ಪರೀಕ್ಷೆ ಸುಸೂತ್ರವಾಗಿ ನಡೆದಿದ್ದು, ಹಲವು ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳಿಗೆ ಭಯಮುಕ್ತ ಪರೀಕ್ಷೆ ಎದುರಿಸಲು ವಿಭಿನ್ನ ರೀತಿಯಲ್ಲಿ ಸ್ವಾಗತ ಕೋರಿದ್ದು, ಗಮನ ಸೆಳೆಯಿತು. ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಮಾಣಿಕೇಶ್ವರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಪ್ರಥಮ ಭಾಷೆ ಕನ್ನಡ ವಿಷಯ ದಿನ ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ಮುನ್ನ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ ಗುಲಾಬಿ ಹೂವು ನೀಡಿ ಸ್ವಾಗತಿಸಲಾಯಿತು.