ಹಮಾಸ್ ಉಗ್ರರು ಮತ್ತು ಇಸ್ರೇಲ್ ನಡುವೆ ಕದನವಿರಾಮ ಏರ್ಪಡಿಸುವಲ್ಲಿ ಯಶಸ್ವಿಯಾಗಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಮತ್ತೊಂದು ಮಾಸ್ಟರ್ ರೂಪಿಸಿದ್ದಾರೆ. ಗಾಜಾಪಟ್ಟಿ ಪ್ರದೇಶವನ್ನು ಹಮಾಸ್ ಉಗ್ರರಿಂದ ಮುಕ್ತ ಮಾಡುವ ಹೊಣೆಯನ್ನು ಪಾಕಿಸ್ತಾನಕ್ಕೆ ನೀಡಲು ಮುಂದಾಗಿದ್ದಾರೆ.
ಪಾಕಿಸ್ತಾನ ಮತ್ತು ಬಲೂಚಿಸ್ತಾನ ಪ್ರತ್ಯೇಕ ದೇಶಗಳು ಎಂಬ ಅರ್ಥದಲ್ಲಿ ಇತ್ತೀಚೆಗೆ ದುಬೈನಲ್ಲಿ ಹೇಳಿಕೆ ನೀಡಿದ್ದ ನಟ ಸಲ್ಮಾನ್ ಖಾನ್ರನ್ನು ಪಾಕಿಸ್ತಾನ ಸರ್ಕಾರ, ಉಗ್ರರ ನಿಗಾ ಪಟ್ಟಿಗೆ ಸೇರಿಸಿದೆ ಎಂದು ವರದಿಗಳು ಹೇಳಿವೆ.
ಕೇರಳದ ಪಟ್ಟಣಂತಿಟ್ಟ ಜಿಲ್ಲೆಯ ಕುನ್ನತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪಾಕಿಸ್ತಾನ ಮುಕ್ಕು (ಜಂಕ್ಷನ್) ಎಂಬ ಗ್ರಾಮದ ಹೆಸರು ಇದೀಗ ವಿವಾದದ ಕೇಂದ್ರವಾಗಿ ಹೊರಹೊಮ್ಮಿದೆ. ಕೂಡಲೇ ಗ್ರಾಮದ ಹೆಸರು ಬದಲಿಸಬೇಕು. ಗ್ರಾಮದಲ್ಲಿ ಸರ್ಕಾರ ಹಾಕಿರುವ ಬೋರ್ಡ್ ಬದಲಿಸಬೇಕೆಂದು ಅದು ಒತ್ತಾಯಿಸಿದೆ.
ಐಸಿಸಿ ಏಕದಿನ ವಿಶ್ವಕಪ್ನಲ್ಲಿ ಭಾರತ ಸತತ 2ನೇ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಭಾನುವಾರ ಬದ್ಧವೈರಿ ಪಾಕಿಸ್ತಾನ ವಿರುದ್ಧ ಭಾರತ 88 ರನ್ಗಳ ಸುಲಭ ಗೆಲುವು ದಾಖಲಿಸಿತು.
ಪಾಕಿಸ್ತಾನದಲ್ಲಿ ಸರ್ಕಾರದ ವಿರುದ್ಧ ಜನತೆ ದಂಗೆದಿದ್ದಾರೆ. ಪಾಕ್ ಸರ್ಕಾರವು ತಮ್ಮ ಪ್ರದೇಶದ ಬಗ್ಗೆ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ದ ಸಾವಿರಾರು ಜನರು ಬೀದಿಗಿಳಿದು ಬೃಹತ್ ಪ್ರತಿಭಟನೆ ಆರಂಭಿಸಿದ್ದು, ಇಬ್ಬರು ಬಲಿಯಾಗಿದ್ದಾರೆ.
ಕಳೆದ ವಾರ ಭಾರತೀಯ ಆಟಗಾರರಿಂದ ಕ್ರಿಕೆಟ್ ಮೈದಾನದಲ್ಲೇ ಭಾರೀ ಅಪಮಾನಕ್ಕೊಳಗಾಗಿದ್ದ ಪಾಕಿಸ್ತಾನ ಕ್ರಿಕೆಟಿಗರು, ಈ ಬಾರಿ ಅದಕ್ಕೆ ತಿರುಗೇಟು ನೀಡುವ ನೆಪದಲ್ಲಿ ಉದ್ಧಟತನ ಮೆರೆದಿದ್ದಾರೆ. ಪಾಕಿಸ್ತಾನ ಬ್ಯಾಟರ್ ಸಾಹಿಬ್ಝಾದ ಫರ್ಹಾನ್ ತನ್ನ ಬ್ಯಾಟ್ ಮೂಲಕ ಗನ್ ಶಾಟ್ ಮಾಡುವ ರೀತಿ ಸಂಭ್ರಮ
ಪಾಕಿಸ್ತಾನ ಮತ್ತು ಸೌದಿ ಅರೇಬಿಯಾ ಬುಧವಾರ ಹೊಸ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿದ್ದು, ಎರಡೂ ರಾಷ್ಟ್ರಗಳ ಮೇಲಿನ ಯಾವುದೇ ದಾಳಿಯನ್ನು ಎರಡೂ ರಾಷ್ಟ್ರಗಳ ವಿರುದ್ಧದ ಆಕ್ರಮಣಕಾರಿ ಕೃತ್ಯವೆಂದು ಪರಿಗಣಿಸಲಾಗುವುದು ಎಂದು ಘೋಷಿಸಿವೆ.
ಭಾನುವಾರ ದುಬೈ ಕ್ರೀಡಾಂಗಣದಲ್ಲಿ ಪಾಕಿಸ್ತಾನ ಆಟಗಾರರನ್ನು ಕಣ್ಣೆತ್ತಿಯೂ ನೋಡದೆ, ಮಾತನಾಡಿಸದೆ, ಕೈಕುಲುಕದೆ ಭಾರತೀಯ ಆಟಗಾರರು ಪಹಲ್ಗಾಂ ಉಗ್ರ ದಾಳಿಗೆ ತಮ್ಮದೇ ರೀತಿಯಲ್ಲಿ ತಕ್ಕ ತಿರುಗೇಟು ನೀಡಿದ್ದರು. ಈ ಸಂಘರ್ಷ ಒಂದು ಪಂದ್ಯಕ್ಕೆ ಸೀಮಿತವಾಗುವಂತೆ ಕಂಡುಬರುತ್ತಿಲ್ಲ.