ಪೊಲೀಸ್ ಅಧಿಕಾರಿಗಳ ಅಮಾನತು: ಸರ್ಕಾರದ ಪಲಾಯನವಾದ
Jun 09 2025, 03:11 AM ISTಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ತಂಡದ ಸಂಭ್ರಮಾಚರಣೆ ಮಾಡಲು ಒಂದೇ ದಿನದಲ್ಲಿ ಭದ್ರತೆ ವ್ಯವಸ್ಥೆ ಮಾಡಲು ಅಸಾಧ್ಯ ಎಂದು ಪೊಲೀಸ್ ಆಯುಕ್ತರಾಗಿದ್ದ ದಯಾನಂದ ಮುಖ್ಯಮಂತ್ರಿಗೆ ಹೇಳಿದ್ದರು. ಹಿಂದಿನ ದಿನ ರಾತ್ರಿ ಪೂರ್ತಿ ದೊಡ್ಡ ಪ್ರಮಾಣದಲ್ಲಿ ಜನರು ಕುಣಿದು ಕುಪ್ಪಳಿಸಿದ್ದರು. ಅದನ್ನೇ ನಿರ್ವಹಿಸಲು ಪೊಲೀಸರಿಗೆ ಸಾಕು ಸಾಕಾಗಿ ಹೋಗಿತ್ತು. ಈ ಕಾರಣದಿಂದ ಪೊಲೀಸ್ ಆಯುಕ್ತರು ಭದ್ರತೆ ಕಷ್ಟಸಾಧ್ಯ ಎಂದಿದ್ದರು. ಆದರೆ, ಮುಖ್ಯಮಂತ್ರಿ-ಉಪಮುಖ್ಯಮಂತ್ರಿಗಳು ಪೈಪೋಟಿಗೆ ಬಿದ್ದು ಅನುಮತಿ ಕೊಡಿಸಿದ್ದಾರೆ.