ಪೊಲೀಸ್ ಕವಾಯತು ಮೈದಾನದಲ್ಲಿ ಕನ್ನಡರಾಜ್ಯೋತ್ಸವ
Oct 16 2025, 02:00 AM ISTಚಿತ್ರದುರ್ಗದ ಹೃದಯ ಭಾಗದಲ್ಲಿರುವ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಮಟ್ಟದಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧ್ಯಕ್ಷೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಯಿತು. ಇದಕ್ಕಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಸ್ವಾಗತ, ಹಣಕಾಸು, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಹಾಗೂ ವೇದಿಕೆ ಸಮಿತಿಗಳನ್ನು ರಚಿಸಲಾಗಿದೆ.