ದಾವಣಗೆರೆ ಬಿಜೆಪಿ ಗುಂಪುಗಾರಿಕೆಗೆ ಅಂತ್ಯ ಹಾಡಿ
Oct 31 2025, 01:30 AM ISTಮಧ್ಯ ಕರ್ನಾಟಕದ ದಾವಣಗೆರೆ ಜಿಲ್ಲೆಯಲ್ಲಿ ಗುಂಪುಗಾರಿಕೆಯಿಂದ ಚುನಾವಣೆಯಲ್ಲಿ ಬಿಜೆಪಿಗೆ ಹಾನಿಯಾಗಿದೆ.  ತಕ್ಷಣವೇ ಪಕ್ಷದಲ್ಲಿ ಬೇರುಬಿಟ್ಟ ಗುಂಪುಗಾರಿಕೆಗೆ ಅಂತ್ಯ ಹಾಡಿ, ಪಕ್ಷವನ್ನು ಹಳೆಯ ಲಯಕ್ಕೆ ತರುವಂತೆ ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಬಳಗದ ಪದಾಧಿಕಾರಿಗಳು, ಬಿಜೆಪಿ ಹಿರಿಯ ಮುಖಂಡರು, ಕಾರ್ಯಕರ್ತರಿಂದ ಜಿಲ್ಲಾ ಕೋರ್ ಕಮಿಟಿ ಸಭೆಗೆ ಆಗಮಿಸಿದ್ದ ಮಾಜಿ ಸಚಿವ ಆರಗ ಜ್ಞಾನೇಂದ್ರ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರಿಗೆ ಮನವಿ ಅರ್ಪಿಸಲಾಯಿತು.