ಎರಡೂವರೆ ಗಂಟೆ ಸಿನಿಮಾವೊಂದು ಇನ್ನೇನು ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಾಗ ಥಿಯೇಟರ್‌ನಲ್ಲಿ ಕರೆಂಟ್ ಹೋದಾಗ ಪರಿಸ್ಥಿತಿ ಹೇಗಿರುತ್ತದೆಯೋ, ಭಾರತ ಹಾಗೂ ಇಂಗ್ಲೆಂಡ್ ನಡುವಿನ ತೆಂಡುಲ್ಕರ್-ಆ್ಯಂಡರ್‌ಸನ್ ಸರಣಿಯ ಕಥೆಯೂ ಅದೇ ರೀತಿ ಆಗಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಷ್ಯಾ ಜತೆ ವ್ಯಾಪಾರ ಮುಂದುವರಿಸಿದರೆ ದಂಡ ವಿಧಿಸುವುದಾಗಿ ಹಾಕಿರುವ ಬೆದರಿಕೆ ಹೊರತಾಗಿಯೂ, ಭಾರತವು ರಷ್ಯಾದಿಂದ ತೈಲ ಖರೀದಿ ಮುಂದುವರಿಸಲಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.
ಉಗ್ರರಾಷ್ಟ್ರ ಪಾಕಿಸ್ತಾನದ ವಿರುದ್ಧ ಭಾರತ ಆಪರೇಷನ್ ಸಿಂದೂರ ನಡೆಸಿ ರೌದ್ರ ರೂಪ ತಾಳಿತ್ತು. ಆ ಮೂಲಕ ವಿಶ್ವಕ್ಕೇ ತನ್ನ ಶಕ್ತಿಯನ್ನು ತೋರಿಸಿದ್ದಲ್ಲದೆ, ಭಾರತದ ಮೇಲೆ ದಾಳಿ ಮಾಡುವವರು ಪಾತಾಳದಲ್ಲಿದ್ದರೂ ಬಿಡುವುದಿಲ್ಲ ಎನ್ನುವುದನ್ನು ಸಾಬೀತುಪಡಿಸಿತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಭಾರತ ಇನ್ನುಮುಂದೆ ರಷ್ಯಾದಿಂದ ತೈಲ ತರಿಸಿಕೊಳ್ಳುವುದಿಲ್ಲ ಎಂದು ಕೇಳಲ್ಪಟ್ಟಿದ್ದೇನೆ. ಇದು ನಿಜವೇ ಆಗಿದ್ದರೆ ಒಳ್ಳೆಯ ಹೆಜ್ಜೆಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.