ರಾಜ್ಯದ ಕೆಲವೆಡೆ ವರುಣಾರ್ಭಟ ಮುಂದುವರೆದಿದ್ದು, ಸೋಮವಾರ ಯಾದಗಿರಿ, ಕೊಡಗು, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಸತತ ಮಳೆಯಿಂದಾಗಿ ಈಗಾಗಲೇ ಬೆಳೆದಿರುವ ಬೆಳೆಗಳು ಹಾನಿಯಾಗುವ ಆತಂಕದಲ್ಲಿ ರೈತರಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿದ್ದ ವಾಯುಭಾರ ಕುಸಿತವು ಮೋಂಥಾ ಹೆಸರಿನ ಚಂಡಮಾರುತವಾಗಿ ಪರಿವರ್ತಿತವಾಗಿದ್ದು, ಸೋಮವಾರ ಆಂಧ್ರಪ್ರದೇಶದ ಕರಾವಳಿಯ ಮೇಲೆ ಅಪ್ಪಳಿಸಿದೆ. ಜೊತೆಗೆ ಮಂಗಳವಾರ ಸಂಜೆಯ ವೇಳೆಗೆ ಅದು ಇನ್ನಷ್ಟು ತೀವ್ರ ಸ್ವರೂಪ ಪಡೆದು
ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುರುವಾರ ತಡರಾತ್ರಿಯಿಂದ ಶುಕ್ರವಾರದವರೆಗೆ ಭರ್ಜರಿ ಮಳೆ ಆಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಾಸನ ಜಿಲ್ಲೆಯಲ್ಲಿ ಮನೆಯ ಗೋಡೆ ಕುಸಿದು ಓರ್ವ ವೃದ್ಧೆ ಮತಪಟ್ಟಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಆಕಳು ಸಾವಿಗೀಡಾಗಿದೆ.