ಕುಶಾಲನಗರ: ನವೆಂಬರ್ 19ರಂದು ಮಹಾಗಣಪತಿ ದೇವಾಲಯ ರಥೋತ್ಸವ
Nov 13 2024, 12:01 AM ISTಕುಶಾಲನಗರದ ಐತಿಹಾಸಿಕ ಶ್ರೀ ಮಹಾಗಣಪತಿ ದೇವಾಲಯ ರಥೋತ್ಸವ 19ರಂದು ಮಧ್ಯಾಹ್ನ 12 ಗಂಟೆಗೆ ಜರುಗಲಿದೆ. ರಥೋತ್ಸವದ ಅಂಗವಾಗಿ ಡಿ.7,8 ಮತ್ತು 9 ರಂದು ರಾಸುಗಳ ಜಾತ್ರೆ ಮತ್ತು ಕೃಷಿ ಮೇಳ ಹಮ್ಮಿಕೊಳ್ಳಲಾಗಿದೆ. ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ನಡೆಯುವ ಗೋಜಾತ್ರೆಯಲ್ಲಿ ಜಿಲ್ಲೆ ಹಾಗೂ ನೆರೆ ಜಿಲ್ಲೆಯಿಂದ ರೈತರು ಪಾಲ್ಗೊಳ್ಳಲಿದ್ದು ತಳಿಯ ರಾಸುಗಳ ಪ್ರದರ್ಶನ ನಡೆಯಲಿದೆ.