ರಾಹುಲ್‌ಗಾಂಧಿ ಮಾಡಿರುವ ಆರೋಪದಲ್ಲಿ ಸತ್ಯವಿದೆ. ಅದಕ್ಕಾಗಿ ಎಐಸಿಸಿಯ ಕರೆಯ ಮೇರೆಗೆ ಆಗಸ್ಟ್ 5 ರಂದು ಕರೆದಿರುವ ಪ್ರತಿಭಟನೆಯಲ್ಲಿ ನಾವೆಲ್ಲರೂ ಭಾಗವಹಿಸುವ ಮೂಲಕ ಅವರ ಕೈ ಬಲಪಡಿಸಬೇಕಿದೆ ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಕಳೆದ 5 ವರ್ಷಗಳಲ್ಲಿ ಭಾರೀ ರಾಜಕೀಯ ಬದಲಾವಣೆಗೆ ಸಾಕ್ಷಿಯಾದ ಮಹಾರಾಷ್ಟ್ರದಲ್ಲಿ ಶೀಘ್ರವೇ ಮತ್ತೊಂದು ಮಹಾವಿಲೀನದ ಸಾಧ್ಯತೆ ಕಂಡುಬಂದಿದೆ. 2005ರಲ್ಲಿ ಪರಸ್ಪರ ಬೇರಾಗಿದ್ದ ಶಿವಸೇನೆ (ಉದ್ಧವ್ ಬಣ) ಮತ್ತು ಸೋದರ ಸಂಬಂಧಿ ರಾಜ್ ಠಾಕ್ರೆ (ಎಂಎನ್‌ಎಸ್) ಮತ್ತೆ ಒಂದಾಗುವ ಸುಳಿವು ನೀಡಿದ್ದಾರೆ.
ಎಲ್ಲ ಬ್ಯಾಂಕ್‌ಗಳಲ್ಲಿ ಆರ್‌ಬಿಐ ಮಾನದಂಡದ ಪ್ರಕಾರ ಮರಾಠಿ ಕಡ್ಡಾಯಗೊಳಿಸಬೇಕು. ಇಲ್ಲದಿದ್ದರೆ ನಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸುತ್ತೇವೆ’ ಎಂದು ಮಹಾರಾಷ್ಟ್ರ ನವನಿರ್ಮಾಣ ಸಮಿತಿ (ಎಂಎನ್‌ಎಸ್)ಯು ಭಾರತೀಯ ಬ್ಯಾಂಕುಗಳ ಸಂಘ (ಐಬಿಎ)ಗೆ ಪತ್ರ ಬರೆದು ಎಚ್ಚರಿಕೆ ನೀಡಿದೆ.
ಬೇಸಿಗೆ ಆರಂಭದಲ್ಲೇ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಅದಕ್ಕಾಗಿ ಕೃಷ್ಣಾ ಹಾಗೂ ಭೀಮಾ ನದಿಗಳಿಗೆ ಮಹಾರಾಷ್ಟ್ರದ ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಫಡ್ನವಿಸ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಏಕನಾಥ್ ಶಿಂಧೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯಿಂದ ವಿವಾದಕ್ಕೆ ಗುರಿಯಾಗಿರುವ ವಿದೂಷಕ ಕುನಾಲ್ ಕಾಮ್ರಾ ಇದೀಗ ತಮ್ಮ ’ನಯಾ ಭಾರತ್’ ಕಾರ್ಯಕ್ರಮದಲ್ಲಿ ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಮತ್ತು ಅವರ ಪತ್ನಿ, ರಾಜ್ಯಸಭೆ ಸಂಸದೆ ಸುಧಾ ಮೂರ್ತಿ ಬಗ್ಗೆ ಲೇವಡಿ ಮಾಡಿದ್ದಾರೆ.