ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ

Aug 04 2025, 11:45 PM IST
ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಗೆ ಹೆಚ್ಚು ಪ್ರಾಮುಖ್ಯತೆ ನೀಡುವ ಮೂಲಕ ದೈಹಿಕ ಹಾಗು ಮಾನಸಿಕವಾಗಿ ಸದೃಢರಾಗಬೇಕು ಶಾಸಕ ಎಚ್ ಕೆ ಸುರೇಶ್ ಹೇಳಿದರು. ಶಾಲೆಗಳು ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಬೇಕು. ಮಕ್ಕಳಿಗೆ ಆತ್ಮವಿಶ್ವಾಸ ಹೆಚ್ಚಿಸಲು ಹಾಗು ಅವರ ಮಾನಸಿಕವಾಗಿ ಹಾಗು ದೈಹಿಕವಾಗಿ ಅವರಿಗೆ ಜ್ಞಾನಕ್ಕೆ ಹೆಚ್ಚು ಅನುಕೂಲವಾಗುವುದರಿಂದ ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು. ದೈಹಿಕ ಶಿಕ್ಚಕರ ಪಾತ್ರ ಇಲ್ಲಿ ಮಹತ್ವವಾಗಿದ್ದು ಭವಿಷ್ಯದಲ್ಲಿ ಉತ್ತಮ ಕ್ರೀಡಾಪಟುಗಳನ್ನು ರೂಪಿಸಲು ಇದು ಉತ್ತಮ ವೇಧಿಕೆಯಾಗಿದೆ. ತೀರ್ಪುಗಾರರು ಯಾವುದೇ ರೀತಿಯ ಪರ ವಿರೋಧ ಮನಸ್ಥಿತಿ ಇಟ್ಟುಕೊಳ್ಳದೆ ಉತ್ತಮ ಕ್ರೀಡಾಪಟುಗಳನ್ನು ಆಯ್ಕೆ ಮಾಡುವಂತೆ ಸೂಚಿಸಿದರು.