ಮುಡಾ. ಇದು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಹುಟ್ಟು ಹಾಕಿದ್ದ ಪ್ರಕರಣ. ನಾಲ್ಕು ದಶಕಗಳ ತಮ್ಮ ರಾಜಕೀಯ ಜೀವನದಲ್ಲಿ ಎಂದೂ ಕಳಂಕ ತಗಲಿಸಿಕೊಳ್ಳದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶುಭ್ರ ಬಿಳಿ ಪಂಚೆಗೆ ಕಪ್ಪು ಮೆತ್ತಿಕೊಳ್ಳುವ ಆತಂಕ ಹುಟ್ಟಿಸಿದ್ದ ಪ್ರಕರಣ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಮುಡಾ ವಿಚಾರದಲ್ಲಿ ಮಸಿ ಬಳಿಯಲು ಬಿಜೆಪಿ, ಜೆಡಿಎಸ್ ಷಡ್ಯಂತ್ರ ನಡೆಸಿತ್ತು. ಆದರೆ, ಮುಡಾ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಸತ್ಯಕ್ಕೆ ಸಿಕ್ಕ ಜಯವಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಹಗರಣ ಸಂಬಂಧ ಜಾರಿ ನಿರ್ದೇಶನಾಲಯವು(ಇ.ಡಿ) ಪ್ರಾಧಿಕಾರದ ಸುಮಾರು 100 ಕೋಟಿ ರು. ಮೌಲ್ಯದ 92 ಸ್ಥಿರಾಸ್ತಿಗಳನ್ನು (ನಿವೇಶನಗಳು) ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವನ್ನು (ಮುಡಾ) ಶುಕ್ರವಾರ ವಿಸರ್ಜಿಸಲಾಗಿದ್ದು, ಹೊಸದಾಗಿ ರಚಿಸಲಾಗಿದ್ದ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಜಾರಿಗೆ ಬಂದಿದೆ