‘ಭಾರತ ಮತ್ತು ಪಾಕಿಸ್ತಾನದ ನಡುವಿನ ಭೀಕರ ಯುದ್ಧ ನಿಲ್ಲಿಸಿದ್ದು ನಾನೇ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 51ನೇ ಬಾರಿ ಪುನರುಚ್ಚರಿಸಿದ್ದಾರೆ. ಜೊತೆಗೆ ಯುದ್ಧ ನಿಲ್ಲಿಸಲು ನಾನು ಉಭಯ ದೇಶಗಳಿಗೆ ಶೇ.200ರಷ್ಟು ತೆರಿಗೆ ಹಾಕುವ ಬೆದರಿಕೆ ಹಾಕಿದ್ದೆ ಎಂದು ಬಹಿರಂಗಪಡಿಸಿದ್ದಾರೆ.
ಪಾಕಿಸ್ತಾನ ಪ್ರಧಾನಿ ಷರೀಫ್, ವಿಶ್ವಸಂಸ್ಥೆಯ ವೇದೆಕೆಯಲ್ಲಿ ಕೂಡ ‘ಭಾರತದ ವಿರುದ್ಧದ ಯುದ್ಧದಲ್ಲಿ ಗೆದ್ದಿದ್ದೇ ನಾವು’ ಎಂದಿದ್ದಾರೆ. ‘ಯುದ್ಧ ನಿಲ್ಲಿಸಿದ್ದು ಅಮೆರಿಕ ಅಧ್ಯಕ್ಷ ಟ್ರಂಪ್. ಅದಕ್ಕೆಂದೇ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿಗೆ ಶಿಫಾರಸು ಮಾಡಿದ್ದೆವು’ ಎಂದು ಸಮರ್ಥಿಸಿಕೊಂಡಿದ್ದಾರೆ.
ಚಂಡೀಗಢದ ವಾಯುನೆಲೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ, ಏರ್ ಮಾರ್ಷಲ್ ಎ.ಪಿ. ಸಿಂಗ್ ಮಿಗ್-21 ವಿಮಾನದ ಅಂತಿಮ ಹಾರಾಟ ನಡೆಸಿ, ವಿದಾಯ ಹೇಳಿದರು. ಈ ವೇಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎಸ್.ಪಿ. ತ್ಯಾಗಿ ಮತ್ತು ಬಿ.ಎಸ್. ಧನೋವಾ, ಶುಭಾಂಶು ಶುಕ್ಲಾ ಹಲವಾರು ಗಣ್ಯರು ಭಾಗವಹಿಸಿದ್ದರು.