‘ರಾಜ್ಯದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರದ ಸಮಯದಲ್ಲಿ ರಜೆ ನೀಡುವ ನೀತಿಯನ್ನು ಪ್ರತಿಯೊಂದು ಕಂಪೆನಿಯೂ ಪಾಲಿಸಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ಕ್ರಮ ಎದುರಿಸಬೇಕಾಗುತ್ತದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರಿ ಉದ್ಯೋಗದಲ್ಲಿ ಕೆಲಸ ಮಾಡುವ ಮಹಿಳೆಯರು ಸೇರಿ ಇಡೀ ದೇಶದಲ್ಲಿ ಮೊದಲ ಬಾರಿಗೆ ಐಟಿ-ಬಿಟಿ, ಖಾಸಗಿ ಕಂಪನಿ, ಕೈಗಾರಿಕೆ, ಗಾರ್ಮೆಂಟ್ಸ್‌ಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೂ ತಿಂಗಳಿಗೆ ಒಂದು ದಿನದಂತೆ ವಾರ್ಷಿಕ 12 ದಿನಗಳ ವೇತನ ಸಹಿತ ಋತುಚಕ್ರ ರಜೆ ಜಾರಿಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ರಾಜ್ಯಾದ್ಯಂತ ಸೆ.22ರಿಂದ ಶುರುವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅ.7ಕ್ಕೇ ಮುಗಿಯಬೇಕಾಗಿದ್ದರೂ ಕೆಲವು ಜಿಲ್ಲೆಗಳಲ್ಲಿ ಪೂರ್ಣಗೊಂಡಿಲ್ಲ. ಹೀಗಾಗಿ ಸಮೀಕ್ಷೆಗೆ 10 ದಿನಗಳ ಹೆಚ್ಚುವರಿ ಕಾಲಾವಕಾಶ ನೀಡಿದ್ದು, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅ.18ರವರೆಗೆ ದಸರಾ ರಜೆ ವಿಸ್ತರಣೆ
ಒಂದೆಡೆ ಕಳೆದ 2 ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ, ಇನ್ನೊಂದೆಡೆ ಮಹಾರಾಷ್ಟ್ರದ ಜಲಾಶಯಗಳಿಂದ ಭೀಮಾ ನದಿಗೆ 3.50 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಮಾಡಿದ ಪರಿಣಾಮ ಉತ್ತರ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಕಾಣಿಸಿಕೊಂಡಿದೆ
ಇದೇ ತಿಂಗಳ 22 ರಿಂದ ದೇಶದಲ್ಲಿ ನವರಾತ್ರಿ ಆರಂಭಗೊಳ್ಳಲಿದೆ. ಇದೇ ವೇಳೆ ರಾಜ್ಯದಲ್ಲಿ ಜಾತಿಗಣತಿಯ ಸಮೀಕ್ಷೆಯೂ ಪ್ರಾರಂಭವಾಗಲಿದೆ. ಈ ಸಮೀಕ್ಷೆಗೆ ರಾಜ್ಯ ಸರ್ಕಾರ ಶಾಲಾ ಶಿಕ್ಷಕರನ್ನು ನೆಚ್ಚಿಕೊಂಡಿದೆ.