ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿರುವ ಬೆನ್ನ ಹಿಂದೆಯೇ ಅವರ ಬಂಡಾಯ ಬಣದಲ್ಲಿ ಗುರುತಿಸಿಕೊಂಡಿರುವ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಮುಂಬೈನಲ್ಲಿ ಭೇಟಿಯಾಗಿ ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆ ಕುರಿತು ಚರ್ಚೆ ನಡೆಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಅಧಿಕಾರ ಪಡೆದವರೇ ಇಂದು ಬಸನಗೌಡ ಪಾಟೀಲ ಯತ್ನಾಳ ಮತ್ತು ರಮೇಶ್ ಜಾರಕಿಹೊಳಿ ಅವರನ್ನು ಎತ್ತಿ ಕಟ್ಟುತ್ತಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಗಂಭೀರವಾಗಿ ಆಪಾದಿಸಿದ್ದಾರೆ.
ಬಹಿರಂಗ ಹೇಳಿಕೆಯನ್ನು ಪರ್ಮನೆಂಟ್ ಆಗಿ ನಿಲ್ಲಿಸಿ ಎಂದು ದೆಹಲಿ ನಾಯಕರಿಂದ ಸೂಚನೆ ಪಡೆದು ಬಂದಿರುವ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧದ ಹೋರಾಟ ಚುಕ್ಕಾಣಿಯನ್ನು ಹಸ್ತಾಂತರ ಮಾಡುವ ಸುಳಿವು ನೀಡಿದ್ದಾರೆ. ‘
ರಾಜ್ಯ ಅಪೆಕ್ಸ್ ಸಹಕಾರಿ ಬ್ಯಾಂಕ್‌ಗೆ 233 ಕೋಟಿ ರು. ವಂಚನೆ ಮಾಡಿರುವ ಪ್ರಕರಣದ ಸಂಬಂಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಅವರ ಮಾಲಿಕತ್ವದ ಸಕ್ಕರೆ ಕಂಪನಿಯ ಅಧಿಕಾರಿಗಳಿಗೆ ರಾಜ್ಯ ಅಪರಾಧ ತನಿಖಾ ದಳದ (ಸಿಐಡಿ) ಪೊಲೀಸರಿಂದ ಬಂಧನ ಭೀತಿ ಎದುರಾಗಿದೆ.