ಚಿತ್ರಕಲಾ ಶಿಕ್ಷಕಿ ಶೋಭಾ ಪ್ರಭಾಕರ್‌ಗೆ ತಾಲೂಕು ರಾಜ್ಯೋತ್ಸವ ಪ್ರಶಸ್ತಿ
Nov 04 2025, 12:15 AM ISTನುಗ್ಗೇಹಳ್ಳಿಯಲ್ಲಿನ ದರ್ಶನ್ ಬಾಲಕಿಯರ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕಿಯಾಗಿ ೧೮ ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಮಕ್ಕಳನ್ನು ಚಿತ್ರಕಲೆ, ಛದ್ಮವೇಷ ಹಾಗೂ ಕರಕುಶಲ ಕಲೆಯಲ್ಲಿ ತರಬೇತುಗೊಳಿಸಿ ಹಲವಾರು ಸಂಘ-ಸಂಸ್ಥೆಗಳು ಹಾಗೂ ಸರ್ಕಾರಿ, ಸೇರಿದಂತೆ ಶೈಕ್ಷಣಿಕ ಕಾರ್ಯಾಗಾರ ಮತ್ತು ಚಿತ್ರಕಲಾ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ಮಾಡಿ ತಾಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಬಹುಮಾನಗಳು ಬರುವಲ್ಲಿ ಕಾರಣವಾಗಿದ್ದಾರೆ. ವಿದ್ಯಾರ್ಥಿಗಳು ಮತ್ತು ಪೋಷಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇದರೊಂದಿಗೆ ಶೋಭಾರವರು ಹಲವಾರು ಸಂಘಸಂಸ್ಥೆಗಳ ಕಾರ್ಯಚಟುವಟಿಕೆಗಳಲ್ಲಿ ಮತ್ತು ಚಿತ್ರಕಲಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದು ಶಿಕ್ಷಣ ಇಲಾಖೆಗೆ ಗೌರವ ತಂದಿದ್ದಾರೆ.