ಇಂದು ರಾಜ್ಯ ಸರ್ಕಾರ ವಿರುದ್ಧ ರಸ್ತೆ ತಡೆ, ಪ್ರತಿಭಟನೆ: ರೇಣುಕಾಚಾರ್ಯ
Aug 01 2025, 11:45 PM ISTಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಲ್ಲಿ ಎಲ್ಲ ರಸ್ತೆಗಳು ಸಂಪೂರ್ಣ ಗುಂಡಿಬಿದ್ದು ಹಾಳಾಗಿವೆ. ಆಗಾಗ ಅಪಘಾತಗಳು ಸಂಭವಿಸುತ್ತಿವೆ. ರಸಗೊಬ್ಬರ ಅಭಾವ ಸೃಷ್ಟಿಯಾಗಿದೆ. ರಾಜ್ಯ ಸರ್ಕಾರ ಅಭಿವೃದ್ಧಿ ಕಾಮಗಾರಿ ನಡೆಸುತ್ತಿಲ್ಲ. ಈ ಎಲ್ಲ ನಿರ್ಲಕ್ಷ್ಯ ಖಂಡಿಸಿ ಆ.2ರಂದು ಬೆಳಗ್ಗೆ 10 ಗಂಟೆಗೆ ರಾಜ್ಯ ಹೆದ್ದಾರಿಯ ಚೀಲೂರು ವೃತ್ತದಲ್ಲಿ ಬಿಜೆಪಿ ಮಂಡಲದ ವತಿಯಿಂದ ರಸ್ತೆ ತಡೆ ಪ್ರತಿಭಟಿಸಲಾಗುವುದು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.