ಎಡಕುಮೇರಿ ರೈಲು ಹಳಿ ಮೇಲೆ ಗುಡ್ಡ ಕುಸಿತ; ಬೆಂಗಳೂರು- ಮಂಗಳೂರು ರೈಲು ಸಂಚಾರ ವ್ಯತ್ಯಯ
Jun 22 2025, 01:18 AM ISTಕಿಲೋಮೀಟರ್ ಸಂಖ್ಯೆ 74 ಮತ್ತು 75ರ ನಡುವಿನ ಅರೆಬೆಟ್ಟ ಮತ್ತು ಎಡಕುಮೇರಿ ಮಧ್ಯ ಭಾಗದಲ್ಲಿ ರೈಲು ಹಳಿ ಮೇಲೆ ಭೂಕುಸಿತವಾಗಿದೆ. ಭಾರೀ ಗಾತ್ರದ ಬಂಡೆ ಉರುಳಿ ಬಿದ್ದಿದ್ದು, ಹಳಿಗೆ ಹಾನಿಯಾಗಿದೆ. ಇದರಿಂದಾಗಿ ಬೆಂಗಳೂರು-ಕಣ್ಣೂರು, ಬೆಂಗಳೂರು-ಮುರುಡೇಶ್ವರ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.