ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಕುರಿತು ನ್ಯಾ. ಎಚ್.ಎನ್. ನಾಗಮೋಹನ್‌ದಾಸ್ ಆಯೋಗದ ವರದಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಲ್ಲಿಕೆಯಾಗಿದ್ದು, ಆ.7ರಂದು ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿ ಜಾರಿ ಬಗ್ಗೆ ಸರ್ಕಾರ ತೀರ್ಮಾನ ಮಾಡಲಿದೆ.
ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಉಪ ಪಂಗಡಗಳ ಅಂಕಿ-ಅಂಶಗಳ ಸಮೀಕ್ಷೆಗಾಗಿ ರಾಜ್ಯ ಸರ್ಕಾರ ರಚಿಸಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ನೇತೃತ್ವದ ಏಕಸದಸ್ಯ ಆಯೋಗ ಸೋಮವಾರ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಲಿದೆ.
ಸ್ವಪಕ್ಷೀಯ ಶಾಸಕರ ಅಸಮಾಧಾನ ತಣಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸುತ್ತಿರುವ ಸರಣಿ ಸಭೆ ಸತತ ಮೂರನೇ ದಿನವೂ ಮುಂದುವರೆಯಿತು.
ವರ್ಗಾವಣೆ ಮಾಡಿದ ಹುದ್ದೆಗೆ ವರದಿ ಮಾಡಿಕೊಳ್ಳಿ, ತಪ್ಪಿದರೆ ಸಂಬಳ ಸಿಗಲ್ಲ!
ಇಂಥದ್ದೊಂದು ಖಡಕ್ ಮೌಖಿಕ ಆದೇಶವನ್ನು ಐಪಿಎಸ್ ಸೇರಿ ಎಲ್ಲಹಂತದ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಇಲಾಖೆ ನೀಡಿದೆ.
ಆರ್‌ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾಗಿದ್ದ ಕಾಲ್ತುಳಿತದ ಸಾವು ಪ್ರಕರಣಗಳ ಸಂಬಂಧ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ.ಕುನ್ಹಾ ನೇತೃತ್ವದ ವಿಚಾರಣಾ ಆಯೋಗ ಸಲ್ಲಿಸಿರುವ ವರದಿ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ.